ಪಿಎಫ್‍ಐ ಸಂಘಟನೆ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್

ಈ ಸುದ್ದಿಯನ್ನು ಶೇರ್ ಮಾಡಿ

Lathi-CHarge

ಮಂಗಳೂರು, ಏ.4-ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಪಿಎಫ್‍ಐ ಸಂಘಟನೆ ಕಾರ್ಯಕರ್ತರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಪೊಲೀಸ್ ಆಯುಕ್ತರ ಕಚೇರಿ ಎದುರು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‍ಐ)ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿ ಸುಮಾರು 70ಜನರನ್ನು ವಶಕ್ಕೆ ಪಡೆದಿದ್ದಾರೆ.   ಕೊಲೆ ಯತ್ನವೊಂದರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಲಾಗಿತ್ತು. ಅವರು ಪಿಎಫ್‍ಐ ಸಂಘಟನೆ ಕಾರ್ಯಕರ್ತರಾಗಿದ್ದು, ಅವರನ್ನು ಬಿಡುಗಡೆ ಮಾಡಬೇಕೆಂದು ಸುಮಾರು 150ಕ್ಕೂ ಹೆಚ್ಚು ಜನ ಪೊಲೀಸ್ ಆಯುಕ್ತರ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಬಸ್‍ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸರು ಉದ್ರಿಕ್ತರನ್ನು ಚದುರಿಸಲು ಲಾಠಿ ಪ್ರಯೋಗಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin