ಬ್ರೌನ್‍ಶುಗರ್ ಮಾರಾಟ ಮಾಡುತ್ತಿದ್ದ ನಾಲ್ವರ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

3-Arrested

ಬೆಂಗಳೂರು,ಏ.4- ಸಾರ್ವಜನಿಕ ಸ್ಥಳಗಳಲ್ಲಿ ಮಾದಕ ವಸ್ತು ಬ್ರೌನ್ ಶುಗರ್ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಗಿರಿನಗರ ಪೊಲೀಸರು ಬಂಧಿಸಿ 28 ಲಕ್ಷ ರೂ.ಮೌಲ್ಯದ 492.80 ಗ್ರಾಂ ತೂಕದ ಮಾಲು ವಶಪಡಿಸಿಕೊಂಡಿದ್ದಾರೆ. ಮೂಲತಃ ತಮಿಳುನಾಡಿನ ವಿಜಯಕುಮಾರ್(47), ಆಂಧ್ರಪ್ರದೇಶದ ಬಸಪ್ಪ(43), ಪೊನ್ನಸ್ವಾಮಿ(50) ಮತ್ತು ಮಾಲೂರಿನ ಗೋವಿಂದಪ್ಪ(45) ಬಂಧಿತ ಆರೋಪಿಗಳು. ಇವರು ಹೊಸಕೆರೆಹಳ್ಳಿ ಕೆರೆಕೋಡಿ ಬಸ್ ನಿಲ್ದಾಣದ ಬಳಿ ಸಾರ್ವಜನಿಕ ಸ್ಥಳಗಳಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಬ್ರೌನ್ ಶುಗರ್‍ನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಗಿರಿನಗರ ಪೊಲೀಸರಿಗೆ ಮಾಹಿತಿ ಲಭಿಸಿದೆ.

ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿದ ಪೊಲೀಸರು ಈ ನಾಲ್ವರನ್ನು ಬಂಧಿಸಿ 10 ಸಾವಿರ ಹಣ ಹಾಗೂ 28 ಲಕ್ಷ ಮೌಲ್ಯದ ಬ್ರೌನ್ ಶುಗರ್‍ನ್ನು ವಶಪಡಿಸಿಕೊಂಡಿದ್ದಾರೆ. ತಮಿಳುನಾಡು ಮೂಲದ ವಿನೋದ್‍ಕುಮಾರ್ ಎಂಬಾತನಿಂದ ಮಾದಕ ವಸ್ತುವನ್ನು ಪಡೆದು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದುದ್ದಾಗಿ ಆರೋಪಿಗಳು ಬಾಯ್ಬಿಟ್ಟಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin