ರಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿದ್ದ ಮಗು ನಾಪತ್ತೆ ಪ್ರಕರಣ : ನಾಲ್ವರ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

raichur

ರಾಯಚೂರು,ಏ.4- ರಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿದ್ದ ಮಗು ಅಪಹರಣಕ್ಕೆ ಸಂಬಂಧಿಸಿದಂತೆ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ. ಮಾ.29ರಂದು ದೇವದುರ್ಗ ತಾಲ್ಲೂಕಿನ ಮಲ್ಲಾಪುರ ಗ್ರಾಮದ ಯಲ್ಲಮ್ಮ ಎಂಬುವವರ ಮಗು ಐಸಿಯುನಿಂದ ದಿಢೀರ್ ನಾಪತ್ತೆಯಾಗಿತ್ತು. ಇದರಿಂದ ಆಸ್ಪತ್ರೆಯ ಸಿಬ್ಬಂದಿಗಳ ಮೇಲೆಯೇ ಅನುಮಾನ ವ್ಯಕ್ತವಾಗಿತ್ತು. ಪೊಲೀಸರು ವಿಚಾರಣೆ ನಡೆಸಿದಾಗ ಒಬ್ಬೊಬ್ಬರು ಒಂದೊಂದು ರೀತಿಯ ಹೇಳಿಕೆ ನೀಡಿದ್ದರಿಂದ ಮಗು ನಾಪತ್ತೆ ನಗರದಲ್ಲಿ ಭಾರೀ ಸುದ್ದಿಯಾಗಿತ್ತು.

ಪೊಲೀಸರು ಆಸ್ಪತ್ರೆಯ ಸಿಸಿಟಿವಿಗಳನ್ನು ಪರಿಶೀಲಿಸಿದಾಗ ಬಿಳಿ ವಸ್ತ್ರ ತೊಟ್ಟಿದ್ದ ವ್ಯಕ್ತಿಯೊಬ್ಬರು ಮಗುವನ್ನು ಎತ್ತಿಕೊಂಡು ಹೋಗುತ್ತಿರುವುದನ್ನು ಪತ್ತೆ ಹಚ್ಚಿದರು. ಒಳಗಿರುವವರೇ ಈ ಕೃತ್ಯ ನಡೆಸಿದ್ದಾರೆಂದು ಖಾತ್ರಿ ಪಡಿಸಿಕೊಂಡ ನಂತರ ತಡಮಾಡದೆ ಐಸಿಯುನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಗಳನ್ನು ತಮ್ಮದೇ ದಾಟಿಯಲ್ಲಿ ವಿಚಾರಿಸಿದಾಗ ಮಗು ಕದ್ದಿರುವ ಬಗ್ಗೆ ಬಾಯ್ಬಿಟ್ಟಿದ್ದಾರೆ.  ಮಗುವನ್ನು ಬಚ್ಚಿಡಲಾಗಿದ್ದ ಸ್ಥಳವನ್ನು ಪತ್ತೆ ಹಚ್ಚಲಾಗಿದೆ. ಮೂಲಗಳ ಪ್ರಕಾರ ಮಾರಾಟ ಮಾಡಿದ್ದರೆಂದು ಹೇಳಲಾಗುತ್ತಿದೆ. ಐಸಿಯುನಲ್ಲಿ ಮಗು ಕಾಣದಾದಾಗ ಸಿಬ್ಬಂದಿಗಳು ನೀವೇ ತೆಗೆದುಕೊಂಡು ಹೋಗಿದ್ದೀರಿ ಎಂದು ಯಲ್ಲಮ್ಮನಿಗೆ ದಬಾಯಿಸಿ ಕಳುಹಿಸಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin