ಇಂದು ಬಿಜೆಪಿ ಸಂಸ್ಥಾಪನಾ ದಿನ, ಕಾರ್ಯಕರ್ತರಿಗೆ ಮೋದಿ, ಷಾ ಶುಭಾಶಯ

ಈ ಸುದ್ದಿಯನ್ನು ಶೇರ್ ಮಾಡಿ

Modi-AMith-Sha--01

ನವದೆಹಲಿ, ಏ.6-ದೇಶದ ಬಡವರು ಮತ್ತು ತುಳಿತಕ್ಕೆ ಒಳಗಾದವರ ಶ್ರೇಯೋಭಿವೃದ್ಧಿಗಾಗಿ ಭಾರತೀಯ ಪಕ್ಷವು ದೊಡ್ಡ ಮಟ್ಟದಲ್ಲಿ ತನ್ನ ಸೇವೆಯನ್ನು ಮುಂದುವರಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬಿಜೆಪಿಯ 37ನೆ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಗೆ ಶುಭ ಕೋರಿರುವ ಪ್ರಧಾನಿ, ಇಷ್ಟು ವರ್ಷಗಳಲ್ಲಿ ಪಕ್ಷದ ಬೆಳವಣಿಗೆಗೆ ಕಾರಣಕರ್ತರಾದ ಎಲ್ಲರನ್ನೂ ಅಭಿನಂದಿಸುವುದಾಗಿ ಹೇಳಿದರು.
ದೇಶದ ಉದ್ದಗಲಕ್ಕೂ ವ್ಯಾಪಿಸಿರುವ ಮತ್ತು ಕಾರ್ಯನಿರ್ವಹಿಸುತ್ತಿರುವ ಬಿಜೆಪಿ ಕಾರ್ಯಕರ್ತರ ಇಡೀ ಕುಟುಂಬಕ್ಕೆ ಸಂಸ್ಥಾಪನಾ ದಿನವಾದ ಇಂದು ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ದೇಶ ಮತ್ತು ಸಮಾಜಕ್ಕೆ ಸೇವೆ ಸಲ್ಲಿಸಲು ಅಹರ್ನಿಶಿ ಶ್ರಮಿಸಿ ಒಂದೊಂದು ಇಟ್ಟಿಗೆ ಮೂಲಕ ಪಕ್ಷವನ್ನು ಕಟ್ಟಿರುವ ಕಾರ್ಯಕರ್ತರ ಅಪಾರ ಪರಿಶ್ರಮದ ಬಗ್ಗೆ ನಮಗೆ ಹೆಮ್ಮೆ ಇದೆ ಎಂದು ಪಕ್ಷದ ಕೇಂದ್ರ ಕಚೇರಿಯಲ್ಲಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಭಾವಚಿತ್ರಕ್ಕೆ ಪುಷ್ಪಾಂಜಲಿ ಸಮರ್ಪಿಸಿ ಅವರು ಪಕ್ಷದ ಸಾಧನೆಯನ್ನು ಪ್ರಶಂಸಿಸಿದರು.

ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವಾಗಿ ಹೊರಹೊಮ್ಮಿರುವ ಭಾರತೀಯ ಜನತಾ ಪಕ್ಷಕ್ಕೆ ಇಂದು ಸಂಸ್ಥಾಪನಾ ದಿನದ ಸಂಭ್ರಮ. ಕಳೆದ 37 ವರ್ಷಗಳ ಹಿಂದೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಬಿಜೆಪಿಯನ್ನು ಸ್ಥಾಪಿಸಿ ಅದರ ಅಧ್ಯಕ್ಷರಾಗಿದ್ದರು. ಇಂದು ಕಮಲ ಪಕ್ಷವು ಭಾರತದಲ್ಲಿ ತನ್ನ ಪ್ರಾಬಲ್ಯವನ್ನು ಮುಂದುವರಿಸಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರೂ ಕೂಡ ಈ ಸಂದರ್ಭದಲ್ಲಿ ಕಾರ್ಯಕರ್ತರಿಗೆ ಶುಭ ಹಾರೈಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin