ಕಾಶ್ಮೀರದಲ್ಲಿ ಭಾರೀ ಹಿಮಪಾತ, ಹೆದ್ದಾರಿ, ಶಾಲೆ ಬಂದ್

ಈ ಸುದ್ದಿಯನ್ನು ಶೇರ್ ಮಾಡಿ

Kashmir--01

ಶ್ರೀನಗರ, ಏ.6 – ಕಣಿವೆ ರಾಜ್ಯ ಕಾಶ್ಮೀರದಲ್ಲಿ ಹಿಮಪಾತದಿಂದ ಭೂಕುಸಿತ ಮತ್ತು ಬಂಡೆಗಳು ಉರುಳಿ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದೆ. ಶ್ರೀನಗರ ಸೇರಿದಂತೆ ವಿವಿಧೆಡೆ ಭಾರೀ ಹಿಮ ಸುರಿಯುತ್ತಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಭಾನುವಾರದವರೆಗೆ ಶಾಲೆಗಳನ್ನು ಮುಚ್ಚುವಂತೆ ಅಧಿಕಾರಿಗಳು ಆದೇಶ ನೀಡಿದ್ದಾರೆ.  ರಾಜಧಾನಿ ಶ್ರೀನಗರದ ನಿವಾಸಿಗಳಿಗೆ ಇಂದು ಮುಂಜಾನೆಯಿಂದಲೇ ಭಾರೀ ಮಳೆ ಮತ್ತು ಹಿಮಪಾತದ ಅಡಚಣೆ ಎದುರಾಯಿತು. ಏಪ್ರಿಲ್‍ನಲ್ಲಿ ಇಂಥ ವಾತಾವರಣ ಅಪರೂಪ. ಕಾಶ್ಮೀರ ಕಣಿವೆಯಲ್ಲಿ ಇನ್ನೂ ಎರಡು ಮೂರು ದಿನಗಳು ಭಾರೀ ಹಿಮಪಾತವಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin