ಪ್ರಥಮ್ ವಿರುದ್ಧ ಪೊಲೀಸರಿಂದ ಸ್ವಯಂಪ್ರೇರಿತ ದೂರು ದಾಖಲು

ಈ ಸುದ್ದಿಯನ್ನು ಶೇರ್ ಮಾಡಿ

pratham

ಬೆಂಗಳೂರು, ಏ.6– ನಿದ್ದೆಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕನ್ನಡದ ನಾಲ್ಕನೆ ಆವೃತ್ತಿಯ ಬಿಗ್‍ಬಾಸ್ ವಿಜೇತ ಪ್ರಥಮ್ ವಿರುದ್ಧ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಿನ್ನೆ ಮುಂಜಾನೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ನಿದ್ದೆಮಾತ್ರೆ ಸೇವಿಸಿದ್ದ ವಿಡಿಯೋವನ್ನು ಪ್ರಥಮ್ ಫೇಸ್‍ಬುಕ್‍ನಲ್ಲಿ ಅಪ್‍ಲೋಡ್ ಮಾಡಿದ್ದರು. ಈ ಸಂಬಂಧ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ನಿದ್ದೆಮಾತ್ರೆ ಸೇವಿಸಿದ್ದ ಪ್ರಥಮ್‍ಗೆ ನಿನ್ನೆ ನಾಗರಬಾವಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ನೀಡಲಾಗಿತ್ತು. ಇದೀಗ ಕಿಮ್ಸ್ ಆಸ್ಪತ್ರೆಯಲ್ಲಿ ಪ್ರಥಮ್ ಚಿಕಿತ್ಸೆ ಪಡೆಯುತ್ತಿದ್ದಾನೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin