ರೈತರಿಗೆ ಯಾರು ಸಾಲ ಕೊಟ್ಟಿದ್ದಾರೋ ಅವರೇ ಮನ್ನಾ ಮಾಡಲಿ : ಸಿಎಂ

ಈ ಸುದ್ದಿಯನ್ನು ಶೇರ್ ಮಾಡಿ

Siddaramaiah-01
ಮೈಸೂರು, ಏ.6- ರೈತರಿಗೆ ಯಾರು ಸಾಲ ಕೊಟ್ಟಿದ್ದಾರೋ ಅವರೇ ಸಾಲ ಮನ್ನಾ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿಕೆ ನೀಡಿದ್ದಾರೆ.ರಾಮಕೃಷ್ಣ ನಗರದ ತಮ್ಮ ನಿವಾಸದಲ್ಲಿ ಭೇಟಿಯಾಗಿದ್ದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರೈತರಿಗೆ ಸಾಲ ನೀಡಿದವರು ಯಾರೋ ಅವರೇ ಸಾಲ ಮನ್ನಾ ಮಾಡಬೇಕು. ರೈತರ ಸಾಲವನ್ನು ನಾವು ಏಕೆ ಮನ್ನಾ ಮಾಡಬೇಕು. ಒಂದು ವೇಳೆ ರಾಷ್ಟ್ರೀಯ ಬ್ಯಾಂಕ್ ಸಾಲವನ್ನು ನಾವು ಮನ್ನಾ ಮಾಡಿದರೆ ನಮ್ಮ ಬ್ಯಾಂಕ್ ನೀಡಿದ ಸಾಲ ಮನ್ನಾ ಮಾಡುವವರು ಯಾರು ಎಂದು ಪ್ರಶ್ನಿಸಿದರು.ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ರೈತರ ಸಾಲ ಮನ್ನಾ ಮಾಡಿದ್ದು, ಅಲ್ಲಿಯಂತೆಯೇ ಇಲ್ಲಿಯೂ ಕೂಡ ರೈತರ ಸಾಲ ಮನ್ನಾ ಮಾಡಬೇಕು ಎಂದು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮುಖ್ಯಮಂತ್ರಿಯವರನ್ನು ಆಗ್ರಹಿಸುತ್ತಿದ್ದಾರೆ. ಆದರೆ, ಮುಖ್ಯಮಂತ್ರಿಯವರು ರೈತರ ಕೃಷಿ ಸಾಲ ಮನ್ನಾ ಮಾಡಲಾಗುವುದಿಲ್ಲ ಎಂದು ಪುನರುಚ್ಚರಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin