ಬೈಕ್‍ಗೆ ಲಾರಿ ಡಿಕ್ಕಿ: ತಾಯಿ ಸಾವು ಮಗ ಗಂಭೀರ

ಈ ಸುದ್ದಿಯನ್ನು ಶೇರ್ ಮಾಡಿ

deadly--accident
ಚನ್ನಪಟ್ಟಣ, ಏ.7-ಟಿಪ್ಪರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಾಯಿ ಸ್ಥಳದಲ್ಲೇ ಸಾವನ್ನಪ್ಪಿ ಸವಾರ ಮಗ ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರು-ಮೈಸೂರ ಹೆದ್ದಾರಿಯಲ್ಲಿನ ಅಪೋಲೋ ಸ್ಟೋರ್ ಬಳಿ ಸಂಭವಿಸಿದೆ.ತಾಲೂಕಿನ ಚಕ್ಕರೆ ಗ್ರಾಮದ ನಿವೃತ್ತ ಶಿಕ್ಷಕ ಚಿಕ್ಕಎಲ್ಲೇಗೌಡ ಅವರ ಪತ್ನಿ ಗೌರಮ್ಮ (50) ಮೃತಪಟ್ಟ ತಾಯಿ. ಈಕೆಯ ಮಗ ಸುರೇಶ್ ಗಂಭೀರವಾಗಿ ಗಾಯಗೊಂಡಿದ್ದಾನೆ.ನಗರದ ಬಸ್ ನಿಲ್ದಾಣಕ್ಕೆ ಬರುತ್ತಿದ್ದ ತಾಯಿ -ಮಗನಿಗೆ ಮೈಸೂರು ಕಡೆಯಿಂದ ಅತಿವೇಗವಾಗಿ ಬಂದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ.

ಡಿಕ್ಕಿ ರಭಸಕ್ಕೆ ನಿಯಂತ್ರಣ ಕಳೆದುಕೊಂಡ ಬೈಕ್ ಪಲ್ಟಿಯಾಗಿದ್ದು, ಹಿಂಬದಿ ಕುಳಿತಿದ್ದ ಗೌರಮ್ಮ ಲಾರಿಯ ಹಿಂಬದಿ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಲಾರಿ ಚಕ್ರ ತಲೆ ಮೇಲೆ ಹರಿದ ಪರಿಣಾಮ ತಲೆ ಸಂಪೂರ್ಣ ಅಪ್ಪಚ್ಚಿಯಾಗಿ ಮೆದುಳು ಚೆಲ್ಲಾಪಿಲ್ಲಿಯಾಗಿ ಬಿದ್ದಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ತಲೆಗೆ ತೀವ್ರ ಪೆಟ್ಟಾಗಿ ಗಂಭೀರ ಗಾಯಗೊಂಡ ಸುರೇಶ್‍ಗೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಬೆಂಗಳೂರಿನ ನಿಮ್ಹಾನ್ಸ್‍ಗೆ ದಾಖಲು ಮಾಡಲಾಗಿದೆ.ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin