ಹಾವು ಕಚ್ಚಿ ಬಾಲಕಿ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

snak
ಮಂಡ್ಯ, ಏ.7- ಹಾವು ಕಚ್ಚಿ ಐದು ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿರುವ ದುರ್ಘಟನೆ ನಾಗಮಂಗಲ ತಾಲೂಕಿನ ಮೂಡಲಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ಸೌಜನ್ಯ ಎಂದು ಗುರುತಿಸಲಾಗಿದೆ.ಕಳೆದ ರಾತ್ರಿ ಮನೆಯಲ್ಲಿ ಮಲಗಿದ್ದ ವೇಳೆ ಹಾವು ಕಚ್ಚಿದೆ. ಏಕಾಏಕಿ ಸೌಜನ್ಯ ಕೂಗಿಕೊಂಡ ಹಿನ್ನೆಲೆಯಲ್ಲಿ ಪೋಷಕರು ಎದ್ದು ನೋಡಿದಾಗ ಹಾವು ಕಾಣಿಸಿಕೊಂಡಿದೆ.ತಕ್ಷಣ ಆತಂಕಗೊಂಡು ನೋವಿನಿಂದ ಬಳಲುತ್ತಿದ್ದ ಬಾಲಕಿಯನ್ನು ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದಾರೆ.ಸ್ಥಳೀಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಬಿಜಿಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ನಾಗಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin