ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ

ಈ ಸುದ್ದಿಯನ್ನು ಶೇರ್ ಮಾಡಿ

Anganawadi

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ, ಹೊಸಕೋಟೆ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿಯರು, ಕಾರ್ಯಕರ್ತೆಯರಿಗಾಗಿ ಅರ್ಜಿ ಆಹ್ವಾನಿಸಿದೆ.   13 ಅಂಗನವಾಡಿ ಸಹಾಯಕಿಯರು ಹಾಗೂ 01 ಅಂಗನವಾಡಿ ಕಾರ್ಯಕರ್ತೆ ಮತ್ತು ಒಂದು ಮಿನಿ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಮೇ 2ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಳಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಟಿಎಪಿಎಂಎಸ್ ಆವರಣ, ಹೊಸಕೋಟೆ ದೂರವಾಣಿ ಸಂಖ್ಯೆ: 080-27931493 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹೊಸಕೋಟೆ ಸಿಡಿಪಿಓ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin