ಅತಿವೇಗವಾಗಿ ಚಲಿಸುತ್ತಿದ್ದ ಕಾರು ಪಲ್ಟಿಯಾಗಿ ಇಬ್ಬರ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

car-accident

ತುಮಕೂರು, ಏ.9- ಅತಿವೇಗವಾಗಿ ಚಲಿಸುತ್ತಿದ್ದ ಕಾರು ಪಲ್ಟಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ ಮೂವರು ಗಂಭೀರ ಗಾಯಗೊಂಡಿರುವ ಘಟನೆ ಕೋರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅನಿಲ್(45), ಆಸೀಸ್ ಪಾಲ್(46) ಮೃತಪಟ್ಟ ದುರ್ದೈವಿಗಳು. ಇವರೆಲ್ಲರೂ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದು , ಬಳ್ಳಾರಿಗೆ ಕಾರಿನಲ್ಲಿ ನಿನ್ನೆ ಸಂಜೆ ತೆರಳುತ್ತಿರುವಾಗ ತುಮಕೂರು-ಶಿರಾ ಹೆದ್ದಾರಿ 48ರ ಬಾಗೇನಹಳ್ಳಿ ಗೇಟ್ ಬಳಿ ಅತಿವೇಗದಿಂದಾಗಿ ಕಾರು ಪಲ್ಟಿ ಹೊಡೆದಿದೆ. ಪಲ್ಟಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ ಮೂವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಕೋರಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin