ಸಾಲಬಾಧೆ ರೈತ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

suicide farmers
ಕೆ.ಆರ್.ಪೇಟೆ,ಏ.9-ಸಾಲಬಾಧೆ ತಾಳಲಾರದೆ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಬೀರುವಳ್ಳಿ ಗ್ರಾಮದಲ್ಲಿ ನಡೆದಿದೆ.ಗ್ರಾಮದ ಲೇಟ್ ಕಾಳೇಗೌಡ ಅವರ ಮಗ ಬಿ.ಕೆ.ಸುರೇಶ್(50) ಆತ್ಮಹತ್ಯೆ ಮಾಡಿಕೊಂಡಿರುವ ರೈತ.ಬೀರುವಳ್ಳಿಯಲ್ಲಿ ಸುಮಾರು 3ಎಕರೆ ಜಮೀನು ಹೊಂದಿರುವ ರೈತ ಬಿ.ಕೆ.ಸುರೇಶ್, ಮಂದಗೆರೆ ವಿಜಯಬ್ಯಾಂಕಿನಲ್ಲಿ 1ಲಕ್ಷ ರೂ ಬೆಳೆ ಸಾಲ, ಜೊತೆಗೆ ಲಕ್ಷಾಂತರ ರೂ ಕೈಸಾಲ ಮಾಡಿಕೊಂಡಿದ್ದರು.
ಬ್ಯಾಂಕಿನವರು ಸಾಲ ವಸೂಲಿಗಾಗಿ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸುವ ನೋಟೀಸ್ ಜಾರಿ ಮಾಡಿದ್ದರಿಂದ ಮನನೊಂದು ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಗ್ರಾಮಾಂತರ ಪೊಲೀಸ್ ಠಾಣೆಗೆ ಅವರ ಪತ್ನಿ ಮಂಜುಳಾ ಅವರು ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಅಕ್ಕಿಹೆಬ್ಬಾಳು ನಾಡ ಕಚೇರಿಯ ಉಪತಹಶೀಲ್ದಾರ್ ಚಂದ್ರಶೇಖರ್, ಗ್ರಾಮ ಲೆಕ್ಕಾಧಿಕಾರಿ ಪ್ರವೀಣ್‍ಕುಮಾರ್, ಸಬ್‍ಇನ್ಸ್‍ಪೆಕ್ಟರ್ ಗಿರೀಶ್, ಎ.ಎಸ್.ಐ.ಪ್ರಮೋದ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

 

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin