ಅಗ್ನಿ ಕೆನ್ನಾಲಗೆಗೆ ಸುಟ್ಟು ಕರಕಲಾದವು 1,000 ಬೈಕ್’ಗಳೂ ಸೇರಿ 220 ವಾಹನಗಳು..!
ರಾಯ್ಪುರ, ಏ.10- ಛತ್ತೀಸ್ಗಢ ರಾಜಧಾನಿ ರಾಯ್ಪುರದ ರೈಲ್ವೆ ನಿಲ್ದಾಣದ ಪಾರ್ಕಿಂಗ್ ಪ್ರದೇಶದಲ್ಲಿ ನಿನ್ನೆ ಸಂಭವಿಸಿದ ಭೀಕರ ಅಗ್ನಿ ಆಕಸ್ಮಿಕದಲ್ಲಿ 220 ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿವೆ. ವಾಹನ ನಿಲುಗಡೆ ಸ್ಥಳದಲ್ಲಿ 1,000ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಪಾರ್ಕಿಂಗ್ ಮಾಡಲಾಗಿತ್ತು. ಮೂಲೆಯಲ್ಲಿ ನಿಲ್ಲಿಸಿದ್ದ ಬೈಕ್ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿತು. ತಕ್ಷಣ ಅಗ್ನಿಶಾಮಕ ದಳ ಮತ್ತು ತುರ್ತು ಸೇವಾ ಪಡೆಗಳಿಗೆ ಸುದ್ದಿ ಮುಟ್ಟಿಸಲಾಯಿತು. ತಕ್ಷಣ ಕಾರ್ಯಪ್ರವೃತ್ತರಾದ ಸಿಬ್ಬಂದಿ ರೈಲ್ವೆ ಸುರಕ್ಷತಾ ಪಡೆಯ ನೆರವಿನಿಂದ ವಾಹನಗಳನ್ನು ಸ್ಥಳಾಂತರಿಸಿದರು. ಆದರೆ, 220 ವಾಹನಗಳು ಬೆಂಕಿಗೆ ಆಹುತಿಯಾದವು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸುಮಾರು ಮೂರು ಗಂಟೆಗಳ ಕಾರ್ಯಾಚರಣೆ ಬಳಿಕ ಬೆಂಕಿನ ಕೆನ್ನಾಲಗೆಯನ್ನು ನಂದಿಸಲಾಯಿತು. ಈ ದುರ್ಘಟನೆಯಲ್ಲಿ ಅದೃಷ್ಟವಶಾತ್ ಯಾರಿಗೂ ಗಾಯಗಳಾಗಿಲ್ಲ.
< Eesanje News 24/7 ನ್ಯೂಸ್ ಆ್ಯಪ್ >
Click Here to Download : Android / iOS