ಆರ್‍ಸಿಬಿಗೆ ಕೊಹ್ಲಿ ಕಮ್ ಬ್ಯಾಕ್

ಈ ಸುದ್ದಿಯನ್ನು ಶೇರ್ ಮಾಡಿ

Kohli-01

ಬೆಂಗಳೂರು,ಏ.11-ಆರ್‍ಸಿಬಿ ಅಭಿಮಾನಿಗಳಿಗೆ ಖುಷಿ ಸುದ್ದಿ. ನಾಯಕ ವಿರಾಟ್ ಕೊಹ್ಲಿ ಅವರು ಮುಂಬೈ ಇಂಡಿಯನ್ಸ್ ವಿರುದ್ದ ತವರಿನಲ್ಲಿ ನಡೆಯಲಿರುವ ಐಪಿಎಲ್ ಪಂದ್ಯದಲ್ಲಿ ಆಡಲಿದ್ದಾರೆ.   ಆಸ್ಟ್ರೇಲಿಯಾ ವಿರುದ್ದ ಟೆಸ್ಟ್ ಪಂದ್ಯದಲ್ಲಿ ಕ್ಷೇತ್ರ ರಕ್ಷಣೆ ವೇಳೆ ಭುಜಕ್ಕೆ ಗಾಯವಾಗಿ ವಿಶ್ರಾಂತಿಯಲ್ಲಿದ್ದ ವಿರಾಟ್ ಕೊಹ್ಲಿ ವೈದ್ಯರ ಸಲಹೆ ಮೇರೆಗೆ ಆರ್‍ಸಿಬಿ ತಂಡದಿಂದ ದೂರ ಉಳಿದಿದ್ದರು. ಈ ಸುದ್ದಿ ಕೇಳುತ್ತಿದ್ದಂತೆ ಐಪಿಎಲ್ ಅಭಿಮಾನಿಗಳಿಗೆ ಭಾರೀ ನಿರಾಸೆಯಾಗಿತ್ತು.
ಗಾಯದಿಂದ ಸಂಪೂರ್ಣ ಗುಣಮುಖನಾಗಿದ್ದು, ಮುಂದಿನ ಪಂದ್ಯದಲ್ಲಿ ಆಡಲು ಫಿಟ್ ಆಗಿದ್ದೇನೆ ಎಂದು ಸ್ವತಃ ಕೊಹ್ಲಿ ಅವರೇ ಜಿಮ್‍ನಲ್ಲಿ ಕಸರತ್ತು ಮಾಡುತ್ತಿರುವ ವಿಡಿಯೋವನ್ನು ಇನ್‍ಸ್ಟ್ರಾಗಾಂನಲ್ಲಿ ಹಾಕಿದ್ದಾರೆ.

ಕೊಹ್ಲಿ ತಂಡಕ್ಕೆ ಮರಳುತ್ತಿರುವುದರಿಂದ ಆರ್‍ಸಿಬಿಗೆ ಆನೆ ಬಲ ಬಂದಂತಾಗಿದೆ. ಈಗಾಗಲೇ ಮೂರು ಪಂದ್ಯ ಆಡಿರುವ ಆರ್‍ಸಿಬಿ ಒಂದರಲ್ಲಿ ಜಯ ಸಾಧಿಸಿ ಎರಡು ಪಂದ್ಯದಲ್ಲಿ ಸೋಲು ಅನುಭವಿಸಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin