ನಿಂತಿದ್ದ ಲಾರಿಗೆ ಬಸ್ ಡಿಕ್ಕಿ : 30 ಪ್ರಯಾಣಿಕರಿಗೆ ಗಾಯ

ಈ ಸುದ್ದಿಯನ್ನು ಶೇರ್ ಮಾಡಿ

accident
ಮಂಡ್ಯ, ಏ.11- ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‍ನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಂಚಿನಕೋಟೆ ಗೇಟ್ ಬಳಿ ಇಂದು ಬೆಳಗ್ಗೆ ನಡೆದಿದೆ.ಬೆಂಗಳೂರಿನಿಂದ ಹಾಸನ ಕಡೆಗೆ ಸಂಚರಿಸುತ್ತಿದ್ದ ಖಾಸಗಿ ಬಸ್ ರಸ್ತೆ ಬದಿ ಕೆಟ್ಟು ನಿಂತಿದ್ದ ಸರಕು ತುಂಬಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ.ಡಿಕ್ಕಿ ಹೊಡೆದ ರಭಸಕ್ಕೆ ನಿದ್ದೆ ಮಂಪರಿನಲ್ಲಿದ್ದ ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಸುದ್ದಿ ತಿಳಿದು ಸ್ಥಳಕ್ಕೆ ಬೆಳ್ಳೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin