ಮೈಸೂರಲ್ಲಿ ಸದ್ಯದಲ್ಲೇ ವಿಮಾನಯಾನ ಪುನರಾರಂಭ

ಈ ಸುದ್ದಿಯನ್ನು ಶೇರ್ ಮಾಡಿ

Pratap

ಮೈಸೂರು, ಏ.11- ಸಾಂಸ್ಕøತಿಕ ನಗರಿ ಮೈಸೂರಿಗೆ ವಿಮಾನಯಾನ ಸದ್ಯದಲ್ಲೇ ಪುನರಾರಂಭಗೊಳ್ಳಲಿದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು. ಕೇಂದ್ರ ವಿಮಾನಯಾನ ರಾಜ್ಯ ಸಚಿವ ಜಯಂತ್ ಸಿಂಹ ಅವರನ್ನು ಭೇಟಿಯಾಗಿ ಮೈಸೂರಿಗೆ ವಿಮಾನಯಾನ ಪುನರಾರಂಭಿಸುವಂತೆ ಮನವಿ ಮಾಡಲಾಗಿದೆ.
ಇದಕ್ಕೆ ಕೇಂದ್ರ ಸಚಿವರು ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ್ದು, ಶೀಘ್ರದಲ್ಲೇ ವಿಮಾನ ಹಾರಾಟ ಪುನರಾರಂಭಿಸುವುದಾಗಿ ಭರವಸೆ ನೀಡಿರುವುದಾಗಿ ಹೇಳಿದರು. ಮೈಸೂರು ಪಾರಂಪರಿಕ ನಗರ. ಸುತ್ತಮುತ್ತಲಿನ ಪ್ರೇಕ್ಷಣೀಯ ಸ್ಥಳಗಳ ವೀಕ್ಷಣೆಗೆ ದೇಶ-ವಿದೇಶಗಳಿಂದ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುತ್ತಾರೆ. ಹಾಗಾಗಿ ವಿಮಾನಯಾನ ಪುನರಾರಂಭಿಸಿದರೆ ಪ್ರವಾಸೋದ್ಯಮ ಅಭಿವೃದ್ಧಿಯಾಗಲಿದೆ ಎಂದು ಕೇಂದ್ರ ಸಚಿವರಿಗೆ ಮನವಿ ಮಾಡಿದ್ದಾರೆ ಎಂದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin