ಲೋಡ್‍ಶೆಡ್ಡಿಂಗ್ ಜಾರಿ ಇಲ್ಲ

ಈ ಸುದ್ದಿಯನ್ನು ಶೇರ್ ಮಾಡಿ

DKShivakumar

ಬೆಂಗಳೂರು,ಏ.12- ವಿದ್ಯುತ್ ದರ ಪರಿಷ್ಕರಣೆ ವಿಚಾರದಲ್ಲಿ ಸರ್ಕಾರ ಮಧ್ಯಪ್ರವೇಶ ಮಾಡು ವುದಿಲ್ಲ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದರು. ಸಚಿವ ಸಂಪುಟ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯುತ್ ದರ ಪರಿಷ್ಕರಿಸುವಂತೆ ವಿದ್ಯುತ್ ವಿತರಣಾ ಕಂಪನಿಗಳು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ ಮನವಿ ಮಾಡಿದ್ದವು. ಆ ಹಿನ್ನೆಲೆಯಲ್ಲಿ ಗ್ರಾಹಕರು ಮತ್ತು ಸರ್ಕಾರದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ವಿದ್ಯುತ್ ದರವನ್ನು ಪರಿಷ್ಕರಿಸ ಲಾಗಿದೆ ಎಂದರು.

ಕೈಗಾರಿಕೆಗಳ ಅನು ಕೂಲತೆಗಾಗಿ ಕೆಲವು ವಿನಾಯ್ತಿಗಳನ್ನು ಬೆಸ್ಕಾಂ ವ್ಯಾಪ್ತಿಯಲ್ಲಿ ನೀಡಲಾಗಿದೆ. ಕೆಇಆರ್‍ಸಿ ಕೈಗೊಂಡಿರುವ ತೀರ್ಮಾನದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ. ವಿದ್ಯುತ್ ಪರಿಷ್ಕರಣೆಗೂ ಮುನ್ನ ಸಾರ್ವಜನಿಕರ ಕುಂದುಕೊರತೆ ಅಹವಾಲ ಗಳನ್ನು ಆಲಿಸಿದೆ ಎಂದು ಹೇಳಿದರು.
ರಾಜ್ಯದಲ್ಲಿ ಅಧಿಕೃತವಾಗಿ ಲೋಡ್ ಶೆಡ್ಡಿಂಗ್ ಜಾರಿ ಮಾಡಿಲ್ಲ. ಆದರೆ ತಾಂತ್ರಿಕ ಕಾರಣಗಳಿಂದ ವಿದ್ಯುತ್ ವ್ಯತ್ಯಯ ಆಗಿರಬಹುದು ಎಂದರು.

ಉಪಚುನಾವಣೆಯಲ್ಲಿ ಗೆಲುವು:

ಗುಂಡ್ಲುಪೇಟೆ, ನಂಜನಗೂಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್‍ನ ಅಭ್ಯರ್ಥಿಗಳು ಬಹುಮತದಿಂದ ಗೆಲ್ಲಲಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿರು. ಈ ಚುನಾವಣೆಯಲ್ಲಿ ನಮ್ಮ ಉಸ್ತುವಾರಿ ಎನ್ನುವುದಕ್ಕಿಂತ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಮುಖಂಡರು ಹೆಚ್ಚಿನ ಗಮನಹರಿಸಿ ಕೆಲಸ ಮಾಡಿದ್ದಾರೆ. ಮತದಾರರು ಕೂಡ ಪ್ರಜ್ಞಾವಂತರಾಗಿದ್ದಾರೆ. ರಾಜ್ಯ ಸರ್ಕಾರ ಮಾಡಿರುವ ಕೆಲಸ ಕಣ್ಣ ಮುಂದಿದೆ. ಬಿಜೆಪಿಯವರು ಮುಂದೆ ಕೆಲಸ ಮಾಡುವುದಾಗಿ ಹೇಳಿದ್ದರು .  ಇವೆರಡನ್ನೂ ಅರಿಯುವ ಪ್ರಜ್ಞಾವಂತಿಕೆ ಮತದಾರರಿಗೆ ಇದೆ. ನಮಗೆ ಯಾವುದೇ ಗುಪ್ತಚರ ವರದಿಯ ಅಗತ್ಯವಿಲ್ಲ. ಶ್ರಮವಿದ್ದ ಕಡೆ ಫಲವಿರುತ್ತದೆ ಎಂದು ಹೇಳಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin