ಜನಾದೇಶಕ್ಕೆ ತಲೆಬಾಗುವೆ : ವಿ.ಶ್ರೀನಿವಾಸ್‍ಪ್ರಸಾದ್

ಈ ಸುದ್ದಿಯನ್ನು ಶೇರ್ ಮಾಡಿ

Srinivas-Prasad

ನಂಜನಗೂಡು, ಏ.13- ಜನಾದೇಶಕ್ಕೆ ತಲೆಬಾಗುತ್ತೇನೆ ಎಂದು ಉಪ ಚುನಾವಣೆಯಲ್ಲಿ ಸೋಲನುಭವಿಸಿರುವ ಬಿಜೆಪಿ ಅಭ್ಯರ್ಥಿ ವಿ.ಶ್ರೀನಿವಾಸ್‍ಪ್ರಸಾದ್ ತಿಳಿಸಿದ್ದಾರೆ. ಫಲಿತಾಂಶ ಪ್ರಕಟವಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೀವನದಲ್ಲಿ 13 ಚುನಾವಣೆಗಳನ್ನು ಎದುರಿಸಿದ್ದೇನೆ. ಸೋಲು-ಗೆಲುವುಗಳನ್ನು ಕಂಡಿದ್ದೇನೆ. ಜನಾದೇಶಕ್ಕೆ ತಲೆಬಾಗುತ್ತೇನೆ. ದುರಹಂಕಾರ ಹಾಗೂ ಸ್ವಾಭಿಮಾನದ ನಡುವೆ ನಡೆದ ಚುನಾವಣೆಯಲ್ಲಿ ನನಗೆ ಸೋಲಾಗಿದೆ.     [ ನಂಜನಗೂಡು-ಗುಂಡ್ಲುಪೇಟೆ ಉಪಚುನಾವಣೆ ಫಲಿತಾಂಶ  (Live Updates) ] ಜನರ ತೀರ್ಪನ್ನು ನಾನು ಒಪ್ಪುತ್ತೇನೆ ಎಂದು ಹೇಳಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin