ಅಂಬೇಡ್ಕರ್ ಕಟೌಟ್ ನಿಲ್ಲಿಸುವಾಗ ವಿದ್ಯುತ್ ಅವಘಡ : ಮೈಸೂರಲ್ಲಿ ಮೂವರ ದುರ್ಮರಣ

ಈ ಸುದ್ದಿಯನ್ನು ಶೇರ್ ಮಾಡಿ

Mysuru-News--01

ಮೈಸೂರು,ಏ.14- ಅಂಬೇಡ್ಕರ್ ಕಟೌಟ್ ನಿಲ್ಲಿಸುವಾಗ ವಿದ್ಯುತ್ ತಂತಿ ತಗುಲಿ ಸಂಭವಿಸಿದ ಅವಘಡದಲ್ಲಿ ಮೂವರು ಸಾವನ್ನಪ್ಪಿ , ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೈಸೂರಿನ ಕ್ಯಾತಮಾರನಹಳ್ಳಿಯಲ್ಲಿ ನಡೆದಿದೆ. ಕುಮಾರಸ್ವಾಮಿ, ಮಣಿಕಂಠ, ಶಿವು ಮೃತ ವ್ಯಕ್ತಿಗಳು.  ಅಂಬೇಡ್ಕರ್ ಜಯಂತಿ ಆಚರಣೆಗೆಂದು ನಿನ್ನೆ ಕಟೌಟ್ ನಿಲ್ಲಿಸುವ ಸಂದರ್ಭದಲ್ಲಿ ವಿದ್ಯುತ್ ತಂತಿ ತಗುಲಿ ಈ ಮೂವರು ಸಾವನ್ನಪ್ಪಿದ್ದಾರೆ. ಗಾಯಾಳು ಗೋಪಾಲಗೌಡ ಹಾಗೂ ಮತ್ತಿತರರಿಗೆ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕ್ಯಾತಮಾರನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin