ಆನ್‍ಲೈನ್‍ನಲ್ಲಿ ವಸತಿ ಗೃಹ ಕಾಯ್ದಿರಿಸಿ

ಈ ಸುದ್ದಿಯನ್ನು ಶೇರ್ ಮಾಡಿ

ಚಿಕ್ಕಬಳ್ಳಾಪುರ, ಏ.13- ನಂದಿಬೆಟ್ಟವು ಸಾಕಷ್ಟು ಐತಿಹಾಸಿಕ ಹಿನ್ನಲೆಯುಳ್ಳದ್ದಾಗಿದ್ದು ಇಲ್ಲಿಗೆ ಸಹಸ್ರಾರು ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಿದ್ದು ಪ್ರವಾಸಿಗರ ಅನುಕೂಲಕ್ಕಾಗಿ ಸಾಕಷ್ಟು ವ್ಯವಸ್ಥೆ ಮಾಡಲಾಗಿದ್ದು ಇಲ್ಲಿ ಉಳಿದುಕೊಳ್ಳಲಿಚ್ಚಿಸುವವರು ಆನ್‍ಲೈನ್‍ನಲ್ಲಿ ವಸತಿ ಗೃಹಗಳನ್ನು ಕಾಯ್ದಿರಿಸಬಹುದೆಂದು ಶಾಸಕ ಡಾ||ಕೆ.ಸುಧಾಕರ್ ತಿಳಿಸಿದರು.ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವತಿಯಿಂದ ನಂದಿ ಗಿರಿಧಾಮಕ್ಕೆ ಭೇಟಿ ನೀಡುವ ಪ್ರವಾಸಿಗರ ಅನುಕೂಲಕ್ಕಾಗಿ ಹೆಚ್ಚುವರಿ ವಸತಿ ಸೌಲಭ್ಯ ಕಲ್ಪಿಸುವ ಸಂಬಂಧ ಗಾಂಧಿನಿಲಯ ಆವರಣದಲ್ಲಿ ನಿರ್ಮಿಸಿರುವ ಹೋಟೆಲ್ ಮಯೂರ ಪೈನ್‍ಟಾಪ್ ವಿಸ್ತರಣಾ ಕಟ್ಟಡದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ನಂದಿಗಿರಿಧಾಮಕ್ಕೆ ಬರುವ ಪ್ರವಾಸಿಗರಿಗೆ ಈ ಹಿಂದೆ ಉಳಿದುಕೊಳ್ಳಲು ಸರಿಯಾದ ವಸತಿ ನಿಲಯಗಳು ಇರಲಿಲ್ಲ. ಈಗ ನೂತನವಾಗಿ ಸುಮಾರು 2 ಕೋಟಿ ರೂ.ವೆಚ್ಚದಲ್ಲಿ 11 ಕೊಠಡಿಗಳುಳ್ಳ ಭವ್ಯವಾದ ಕಟ್ಟಡವನ್ನು ನಿರ್ಮಿಸಲಾಗಿದೆ ಎಂದರು.ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದೀಪ್ತಿ ಆದಿತ್ಯ ಕಾನಡೆ, ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಯಲುವಳ್ಳಿ ಎನ್.ರಮೇಶ್, ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಸೇರಿದಂತೆ ಇನ್ನಿತರ ಗಣ್ಯರು ಇದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin