ಮೇ 10 ರಂದು ಎಸ್‍ಎಸ್‍ಎಲ್‍ಸಿ ರಿಸಲ್ಟ್

ಈ ಸುದ್ದಿಯನ್ನು ಶೇರ್ ಮಾಡಿ

SSLC-Result--01

ರಾಯಚೂರು, ಏ.14-ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಫಲಿತಾಂಶವನ್ನು ಮೇ 10 ರಂದು ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್‍ಸೇಠ್ ತಿಳಿಸಿದ್ದಾರೆ.  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಬಿಗಿ ಕ್ರಮಗಳಿಂದಾಗಿ ಈ ಬಾರಿ ಪರೀಕ್ಷೆಗಳು ಸುಗಮವಾಗಿ ನಡೆದಿವೆ. ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿ ಮೌಲ್ಯಮಾಪನವೂ ಯಾವುದೇ ಅಡೆತಡೆ ಇಲ್ಲದೆ ನಡೆಯುತ್ತಿದೆ. ಹಾಗಾಗಿ ಎಸ್‍ಎಸ್‍ಎಲ್‍ಸಿ ಫಲಿತಾಂಶವನ್ನು ಮೇ 10 ರಂದು ಪ್ರಕಟಿಸಲಾಗುವುದು ಎಂದರು.

ರಾಜ್ಯದಲ್ಲಿ ಶಿಥಿಲಾವಸ್ಥೆಯಲ್ಲಿರುವ ಸರ್ಕಾರಿ ಶಾಲಾ ಕಟ್ಟಡಗಳ ಬಗ್ಗೆ ಜಿಲ್ಲಾವಾರು ಮಾಹಿತಿ ಪಡೆಯಲಾಗುತ್ತಿದ್ದು, ಶೀಘ್ರದಲ್ಲಿ ಅವುಗಳ ದುರಸ್ತಿಗೂ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin