ಕಿಡ್ನಿ ವೈಫಲ್ಯದಿಂದ ಮಾಜಿ ಶಾಸಕ ಎಸ್.ವಿ.ಅಶ್ವತ್ಥನಾರಾಯಣರೆಡ್ಡಿ ನಿಧನ

ಈ ಸುದ್ದಿಯನ್ನು ಶೇರ್ ಮಾಡಿ

Ashwath-Narayana-reddy

ಗೌರಿಬಿದನೂರು, ಏ.15- ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ಎಸ್.ವಿ.ಅಶ್ವತ್ಥನಾರಾಯಣರೆಡ್ಡಿ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. 1989ರಿಂದ 94ರ ಅವಧಿಯಲ್ಲಿ ಗೌರಿಬಿದನೂರಿನ ಶಾಸಕರಾಗಿದ್ದರು. ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಅವರು, ಹಲವು ದಿನಗಳಿಂದ ಮಲ್ಲಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇಂದು ಸಂಜೆ 4 ಗಂಟೆ ಅವರ ಸ್ವ ಗ್ರಾಮ ಸಾದೇನಹಳ್ಳಿ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin