ಮೈಸೂರಿಗರಿಗೆ ಅನಿಯಮಿತ ಲೋಡ್ ಶೆಡ್ಡಿಂಗ್ ಕಿರಿಕಿರಿ

ಈ ಸುದ್ದಿಯನ್ನು ಶೇರ್ ಮಾಡಿ

Load-SHedding--01

ಮೈಸೂರು.ಏ.16- ಬೇಸಿಗೆಯಲ್ಲೂ ರಾಜ್ಯಾದ್ಯಂತ ಯಾವುದೇ ಭಾಗದಲ್ಲಿ ಲೋಡ್ ಶೆಡ್ಡಿಂಗ್ ಇರುವುದಿಲ್ಲ ಎಂದು ಸ್ವತಃ ಇಂಧನ ಸಚಿವ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆಯ ನಡುವೆ ಮೈಸೂರಿನಲ್ಲಿ ಅನಿಯಮಿತ ಲೋಡ್ ಶೆಡ್ಡಿಂಗ್‍ನಿಂದ ಜನತೆ ಬಸವಳಿದಿದ್ದಾರೆ. ನಮ್ಮ ರಾಜ್ಯದಿಂದ ಹೊರರಾಜ್ಯಗಳಿಗೆ ನೀಡುವಷ್ಟು ವಿದ್ಯುತ್ ನಮ್ಮಲ್ಲಿದೆ ಹಾಗಾಗಿ ಈ ಬೇಸಿಗೆಯಲ್ಲಿ ಯಾವುದೇ ಲೋಡ್ ಶೆಡ್ಡಿಂಗ್ ಇಲ್ಲ ಎಂದು ಸಚಿವರೇ ಹೇಳಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲೆ ಕಳೆದ 3-4ದಿನಗಳಿಂದ ಅನಿಯಮಿತ ಲೋಡ್ ಶೆಡ್ಡಿಂಗ್ ಮಾಡುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಬೆಳಿಗ್ಗೆ ಒಂದು ಗಂಟೆ ಲೋಡ್ ಶೆಡ್ಡಿಂಗ್ ಮಾಡುವುದಲ್ಲದೆ, ಮಧ್ಯಾಹ್ನ ಅಥವಾ ರಾತ್ರಿ ಮತ್ತೆ ಒಂದು ಗಂಟೆ ಲೋಡ್ ಶೆಡ್ಡಿಂಗ್ ಮಾಡುತ್ತಿರುವುದರಿಂದ ಚೆಸ್ಕಾಂಗೆ ಜನ ಹಿಡಿ ಶಾಪ ಹಾಕುತ್ತಿದ್ದಾರೆ. ಇದಿಷ್ಟೆ ಅಲ್ಲದೇ ಚೆಸ್ಕಾಂ ಪತ್ರಿಕಾ ಹೇಳಿಕೆ ನೀಡಿ ನಿರ್ವಹಣೆ ಹೆಸರಿನಲ್ಲಿ ನಗರದ ಯಾವುದಾದರೂ ಒಂದು ಭಾಗದಲ್ಲಿ ಪ್ರತಿ ದಿನ ಬೆಳಗಿನಿಂದ ಸಂಜೆ ವರೆಗೆ ವಿದ್ಯುತ್ ಕಡಿತಗೊಳಿಸುತ್ತಾರೆ.  ಇತ್ತೀಚೆಗಷ್ಟೆ ವಿದ್ಯುತ್ ದರ ಏರಿಕೆ ಮಾಡಿರುವ ಸರ್ಕಾರ ಇತ್ತ ಲೋಡ್ ಶೆಡ್ಡಿಂಗ್ ಸಹ ಮಾಡುತ್ತಿರುವುದರಿಂದ ಜನ ಅಸಮಧಾನ ವ್ಯಕ್ತಪಡಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin