2018ರ ಚುನಾವಣೆಗೆ ಈಗಲೇ ಅಭ್ಯರ್ಥಿಗಳ ಪಟ್ಟಿ ರೆಡಿಮಾಡಿ : ಕಾಂಗ್ರೆಸ್ ಹೈಕಮಾಂಡ್ ಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

Sonia--Siddaramaiah

ಬೆಂಗಳೂರು, ಏ.16- ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಈಗಲೇ ಸಿದ್ಧಗೊಳಿಸಿ ಎಂದು ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರಿಗೆ ಸೂಚನೆ ನೀಡಿದೆ. ಕರ್ನಾಟಕ ಕಾಂಗ್ರೆಸ್‍ನ ಭದ್ರಕೋಟೆಯಾಗಿದ್ದು, ಮುಂಬರುವ ವಿಧಾನಸಭೆ ಚುನಾವಣೆಗೆ ಗೆಲ್ಲುವ ಅಭ್ಯರ್ಥಿಗಳನ್ನು ಹುಡುಕಿ ಈಗಲೇ ಪಟ್ಟಿ ಸಿದ್ಧಗೊಳಿಸಿ ನಮಗೆ ಕಳುಹಿಸಿಕೊಡಿ. ನಾವು ಸಮ್ಮತಿ ನೀಡಲು ಸಿದ್ಧರಿದ್ದೇವೆ ಎಂದು ತಿಳಿಸಿದ್ದಾರೆ ಎಂದು ತಿಳಿದುಬಂದಿದೆ. ಉಪಚುನಾವಣಾ ಫಲಿತಾಂಶದ ಗೆಲುವಿನ ಹುಮ್ಮಸ್ಸಿನೊಂದಿಗೆ ನವದೆಹಲಿಗೆ ತೆರಳಿ ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡಿದ ಸಿದ್ದರಾಮಯ್ಯ, ಪರಮೇಶ್ವರ್ ಅವರಿಗೆ ಮುಂಬರುವ ಚುನಾವಣೆಗೆ ಸಜ್ಜಾಗುವಂತೆ ಹಾಗೂ ಅಗತ್ಯ ರೂಪುರೇಷೆಗಳನ್ನು ಸಿದ್ದಪಡಿಸುವಂತೆ, ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ರವಾನಿಸುವಂತೆ ತಿಳಿಸಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಂಪುಟದಲ್ಲಿ ಖಾಲಿ ಇರುವ ಎರಡು ಸಚಿವ ಸ್ಥಾನಗಳನ್ನು ಭರ್ತಿ ಮಾಡಲು ಹೈಕಮಾಂಡ್ ಅನುಮತಿ ಕೋರಿದ್ದರಾದರೂ ಆ ಬಗ್ಗೆ ಹೈಕಮಾಂಡ್ ಹೆಚ್ಚು ತಲೆ ಕೆಡಿಸಿಕೊಂಡಿಲ್ಲ. ಮೇಲ್ಮನೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕಕ್ಕೆ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟಿದೆ ಎಂದು ಹೇಳಲಾಗಿದೆ.  ಇನ್ನುಳಿದಂತೆ ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ ಎಂದು ವರಿಷ್ಠರ ಭೇಟಿ ನಂತರ ಮುಖ್ಯಮಂತ್ರಿಗಳೇ ಸ್ಪಷ್ಟಪಡಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಚರ್ಚೆಯೂ ಕೂಡ ನಡೆದಿಲ್ಲ.ಹಾಗಾಗಿ ಕೆಪಿಸಿಸಿ ಅಧ್ಯಕ್ಷರಾಗಿ ಪರಮೇಶ್ವರ್ ಅವರೇ ಮುಂದುವರೆಯಲಿದ್ದಾರೆ. ಈ ಎಲ್ಲಾ ಬೆಳವಣಿಗೆಗಳನ್ನು ಗಮನಿಸಿದರೆ ಮುಂಬರುವ 2018ರ ವಿಧಾನಸಭೆ ಚುನಾವಣೆ ಪರಂ -ಸಿದ್ದು ನೇತೃತ್ವದಲ್ಲೇ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಸುದೀರ್ಘ ಅವಧಿಗೆ ಕೆಪಿಸಿಸಿ ಅಧ್ಯಕ್ಷರಾಗಿರುವ ಪರಮೇಶ್ವರ್ ಅವರನ್ನು ಬದಲಾಯಿಸುವ ಸಾಹಸಕ್ಕೆ ಈ ಸಂದರ್ಭದಲ್ಲಿ ಹೈಕಮಾಂಡ್ ನಾಯಕರು ಕೈ ಹಾಕಲಿದ್ದಾರೆಯೇ ಎಂಬುದು ದೊಡ್ಡ ಪ್ರಶ್ನೆಯಾಗಿದೆ. ಲಿಂಗಾಯತ ಅಥವಾ ಒಕ್ಕಲಿಗರನ್ನು ಪಕ್ಷಕ್ಕೆ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕೆಂಬ ಕೂಗು ಪ್ರಬಲವಾಗಿ ಕೇಳಿ ಬಂದಿದೆಯಾದರೂ ಹೈಕಮಾಂಡ್ ಈ ಬಗ್ಗೆ ಯಾವುದೇ ಕೆಡಿಸಿಕೊಂಡಿಲ್ಲ. ಕಳೆದ ಆರು ವರ್ಷಗಳಿಂದ ಪರಮೇಶ್ವರ್ ಅವರೇ ಯಶಸ್ವಿಯಾಗಿ ಆ ಸ್ಥಾನವನ್ನು ನಿಭಾಯಿಸುತ್ತಿದ್ದಾರೆ. ಸದ್ಯ ಅಧ್ಯಕ್ಷರ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ.  ಚುನಾವಣೆ ಹತ್ತಿರದ ಸಂದರ್ಭದಲ್ಲಿ ಹೈಕಮಾಂಡ್ ಯಾ ವಕ್ರಮ ಕೈಗೊಳ್ಳಲಿದೆ ಎಂಬುದನ್ನು ಕಾದುನೋಡಬೇಕು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin