‘ಷರತ್ತು ವಿಧಿಸುವಷ್ಟು ದೊಡ್ಡವನು ನಾನಲ್ಲ, ಪಕ್ಷ ಕೊಟ್ಟ ಜವಾಬ್ದಾರಿಯನ್ನು ನಿಭಾಯಿಸುತ್ತೇನೆ’

ಈ ಸುದ್ದಿಯನ್ನು ಶೇರ್ ಮಾಡಿ

M.B.Patil

ಬೆಂಗಳೂರು, ಏ.17– ಪಕ್ಷಕ್ಕೆ ಷರತ್ತು ವಿಧಿಸುವಷ್ಟು ದೊಡ್ಡವನು ನಾನಲ್ಲ. ಪಕ್ಷ ವಹಿಸುವ ಜವಾಬ್ದಾರಿಯನ್ನು ಶಿಸ್ತಿನಿಂದ ನಿರ್ವಹಿಸುತ್ತೇನೆ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.  ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಎಂದು ನಾನೆಲ್ಲೂ ಬಹಿರಂಗವಾಗಿ ಹೇಳಿಲ್ಲ. ನಾನಾಗಲಿ, ನನ್ನ ತಂದೆಯಾಗಲಿ ಅಧಿಕಾರದ ಹಿಂದೆ ಹೋದವರಲ್ಲ. ಜನಸೇವೆ ಮಾಡುತ್ತಿದ್ದೇವೆ. ಪಕ್ಷ ಕೊಟ್ಟ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಹೇಳಿದರು.ಕಳೆದ ಒಂದು ವರ್ಷದ ಹಿಂದೆ ಎಐಸಿಸಿ ಅಧ್ಯಕ್ಷರಾದ ಸೋನಿಯಾಗಾಂಧಿಯವರು ನನ್ನನ್ನು ನವದೆಹಲಿಗೆ ಕರೆಸಿಕೊಂಡು ನೀವು ಕೆಪಿಸಿಸಿ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳಿ ಎಂದು ಹೇಳಿದ್ದರು. ಆಗ ಜಲಸಂಪನ್ಮೂಲ ಇಲಾಖೆಯಲ್ಲಿ ಸಾಕಷ್ಟು ಕೆಲಸಗಳು ಇವೆ. ಅವುಗಳನ್ನೆಲ್ಲ ನಿರ್ವಹಿಸಬೇಕಾಗಿದೆ. ಹಾಗಾಗಿ ನನ್ನ ಅಭಿಪ್ರಾಯವನ್ನು ಅವರಿಗೆ ತಿಳಿಸಿ ಬಂದಿದ್ದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ದೆಹಲಿಗೆ ಭೇಟಿ ನೀಡಿದ್ದಾಗ ವರಿಷ್ಠರೊಂದಿಗೆ ಏನು ಚರ್ಚೆ ನಡೆಸಿದ್ದಾರೆ ಎಂದು ನನಗೆ ಗೊತ್ತಿಲ್ಲ. ಉಪಚುನಾವಣೆ ಫಲಿತಾಂಶದಿಂದ ಪಕ್ಷ ಬಲಗೊಂಡಿದೆ. ಅದನ್ನು ಮತ್ತಷ್ಟು ಬಲಗೊಳಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin