ಅಕ್ರಮ ಗಣಿಗಾರಿಕೆ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ವಹಿಸಿ : ಸಚಿವ ಎ.ಮಂಜು

ಈ ಸುದ್ದಿಯನ್ನು ಶೇರ್ ಮಾಡಿ

manju-m-2

ಹಾಸನ, ಏ.18- ಜಿಲ್ಲೆಯಲ್ಲಿ ನಿಯಮ ಬಾಹಿರವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಸರ್ಕಾರದ ಸಂಪತ್ತು ಲೂಟಿ ಮಾಡಲು ಯಾರಿಗೂ ಅವಕಾಶ ನೀಡಬಾರದು ಎಂದು ಗಣಿ ಮತ್ತು ಭೂ ವಿಜ್ಞಾನ  ಇಲಾಖೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು ತಿಳಿಸಿದ್ದಾರೆ.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಡಿಸ್ಟ್ರಿಕ್ಟ್ ಮಿನರಲ್ ಫೌಂಡೇಷನ್ ಫಂಡ್ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈಗಾಗಲೇ ಅರಸೀಕೆರೆ, ಹಾಸನ, ಚನ್ನರಾಯಪಟ್ಟಣ ಸೇರಿದಂತೆ ಹಲವೆಡೆ ದಂಡ ವಿಧಿಸಲಾಗಿದೆ. ಹೀಗೆ ಸುಮಾರು 12 ಕೋಟಿ ರೂ. ವಸೂಲಾಗಬೇಕಿದೆ. ಅದನ್ನು ಆದಷ್ಟು ಬೇಗ ಮಾಡಬೇಕು. ದಂಡ ಕಟ್ಟಲು ವಿಳಂಬ ಮಾಡುವ ಗಣಿ ಗುತ್ತಿಗೆದಾರರ ಲೈಸೆನ್ಸ್‍ಗಳನ್ನು ರದ್ದುಪಡಿಸಬೇಕು ಅಥವಾ ಪರ್ಮಿಟ್‍ಗಳನ್ನು ತಡೆಹಿಡಿಯಬೇಕು ಎಂದರು.

ಜಿಲ್ಲೆಯಲ್ಲಿ ಕೆಲವೆಡೆ ಎಂ.ಸ್ಯಾಂಡ್ ತಯಾರಿಕಾ ಘಟಕ ಸ್ಥಾಪಿಸಲು ಪರವಾನಗಿ ಪಡೆದು ಬೇರೆ ರೀತಿ ಗಣಿಗಾರಿಕೆ ಮಾಡುತ್ತಿದ್ದಾರೆ. ಎಂ.ಸ್ಯಾಂಡ್ ತಯಾರಿಕೆಗೆ ಬೇಕಾದ ಯಂತ್ರೋಪಕರಣಗಳನ್ನು ಅಳವಡಿಸಿ, ಅಲ್ಲದೆ ಕಲ್ಲುಗಳ ಬ್ಲ್ಯಾಸ್ಟಿಂಗ್‍ಗೆ ಅಪಾಯಕಾರಿ ಮಾರ್ಗಗಳನ್ನು ಅನುಸರಿಸಲಾಗುತ್ತಿದೆ. ಅವುಗಳಿಗೆ ನಿರ್ಬಂಧ ಹೇರಬೇಕು ಎಂದು ತಿಳಿಸಿದರು. ಜಿಲ್ಲಾಧಿಕಾರಿ ವಿ.ಚೈತ್ರ, ಜಿಪಂ ಅಧ್ಯಕ್ಷೆ ಶ್ವೇತಾ ದೇವರಾಜ್, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಆರ್.ವೆಂಕಟೆಶ್ ಕುಮಾರ್ ಮತ್ತು ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin