ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ : ಮೂವರ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು, ಏ.18-ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ ನಡೆಸಿರುವ ನಗರ ಪೊಲೀಸರು ಮೂವರನ್ನು ಬಂಧಿಸಿ ಪಣಕ್ಕಿಟ್ಟಿದ್ದ 61 ಸಾವಿರ ನಗದು ಮತ್ತು ಕಾರನ್ನು ವಶಪಡಿಸಿಕೊಂಡಿದ್ದಾರೆ.ಕೆ.ಆರ್.ಮೊಹಲ್ಲಾದ ಹೊಸ ಬಂಡಿಕೇರಿ ನಿವಾಸಿ ಚಂದ್ರಶೇಖರ್, ದೇವರಾಜ್ ಮೊಹಲ್ಲಾದ ರಾಜು, ಕೆಆರ್‍ಎಸ್‍ನ ರಾಜೇಶ್ ಬಂಧಿತ ಆರೋಪಿಗಳು.ಕೆ.ಆರ್.ಮೊಹಲ್ಲಾದ 3ನೇ ಕ್ರಾಸ್‍ನ ಮನೆಯೊಂದರಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಆಧಾರದ ಮೇಲೆ ಸಿಸಿಬಿ ಪೊಲೀಸರು ಕಾರ್ಯಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.ಬಂಧಿತರಿಂದ 61ಸಾವಿರ ರೂ. ನಗದು, ಲ್ಯಾಪ್‍ಟಾಪ್, ಒಂದು ಕಾರು, ಒಂದು ಟಿವಿ ಹಾಗೂ ಮೊಬೈಲ್‍ಗಳನ್ನು ವಶಪಡಿಸಿಕೊಂಡಿದ್ದಾರೆ.ಸಿಸಿಬಿ ಎಸಿಪಿ ಗೋಪಾಲ ನೇತೃತ್ವದಲ್ಲಿ ಇನ್ಸ್‍ಪೆಕ್ಟರ್ ರಾಜು, ಕೃಷ್ಣರಾಜ ಠಾಣೆ ಇನ್ಸ್‍ಪೆಕ್ಟರ್ ಪ್ರಕಾಶ್ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin