ಲಂಡನ್’ನಲ್ಲಿ ಮದ್ಯ ದೊರೆ ವಿಜಯ್ ಮಲ್ಯ ಬಂಧನ, ಜಾಮೀನು

ಈ ಸುದ್ದಿಯನ್ನು ಶೇರ್ ಮಾಡಿ

Vijay-Malya
ಲಂಡನ್, ಏ.18– ಬ್ಯಾಂಕ್‍ಗಳಲ್ಲಿ ಸಾವಿರಾರು ಕೋಟಿ ರೂ. ಸಾಲ ಪಡೆದು ತಲೆಮರೆಸಿಕೊಂಡಿದ್ದ ಮದ್ಯದ ದೊರೆ, ಉದ್ಯಮಿ ವಿಜಯ್ ಮಲ್ಯರನ್ನು ಸ್ಕಾಟ್‍ಲ್ಯಾಂಡ್ ಯಾರ್ಡ್ ಪೊಲೀಸರು ಬಂಧಿಸಿದ್ದಾರೆ.  ವಿವಿಧ ಬ್ಯಾಂಕ್‍ಗಳಲ್ಲಿ ಸಾವಿರಾರು ಕೋಟಿ ರೂ. ಸಾಲ ಪಡೆದಿದ್ದ ಮಲ್ಯ ಭಾರತ ಬಿಟ್ಟು ಲಂಡನ್‍ನಲ್ಲಿ ತಲೆಮರೆಸಿಕೊಂಡಿದ್ದ. ಸಾಲ ಮರುಪಾವತಿ ಮಾಡದ ವಿಜಯ್ ಮಲ್ಯ ವಿರುದ್ಧ ಹಲವು ಬ್ಯಾಂಕ್‍ಗಳು ಸುಪ್ರೀಂಕೋರ್ಟ್‍ನಲ್ಲಿ ಮೊಕದ್ದಮೆ ಹೂಡಿದ್ದವು.ಸುಪ್ರೀಂಕೋರ್ಟ್‍ನಲ್ಲಿ ಪ್ರಕರಣ ವಿಚಾರಣೆಯಲ್ಲಿರುವ ಸಂದರ್ಭದಲ್ಲೇ ಲಂಡನ್‍ಗೆ ಪರಾರಿಯಾದ ಮಲ್ಯ ತನ್ನ ಹಣ, ಆಸ್ತಿಯನ್ನು ಮಕ್ಕಳಿಗೆ ಹಂಚಿಕೆ ಮಾಡಿದ್ದನು. ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಬಂಧನದ ವಾರೆಂಟ್ ಸಹ ಜಾರಿ ಮಾಡಿತ್ತು. ಆದರೆ ಲಂಡನ್‍ನಲ್ಲಿ ಮಲ್ಯ ತಲೆಮರೆಸಿಕೊಂಡಿದ್ದರಿಂದ ಮಲ್ಯನನ್ನು ಬಂಧಿಸಲು ಸಾಧ್ಯವಾಗಿರಲಿಲ್ಲ. ಸ್ಕಾಟ್‍ಲ್ಯಾಂಡ್ ಯಾರ್ಡ್ ಪೊಲೀಸರು ಇಂದು ವಿಜಯ್ ಮಲ್ಯನನ್ನು ಬಂಧಿಸಿದ್ದು, ವೆಸ್ಟ್ ಮಿನಿಸ್ಟರ್ ಕೋರ್ಟ್‍ಗೆ ಹಾಜರುಪಡಿಸುವ ಸಾಧ್ಯತೆ ಇದೆ. ಕೋರ್ಟ್‍ಗೆ ಹಾಜರುಪಡಿಸಿದ ನಂತರ ಮಲ್ಯನನ್ನು ಗಡಿಪಾರು ಮಾಡುವ ಸಾಧ್ಯತೆಯಿದ್ದು, ಆ ನಂತರ ಭಾರತಕ್ಕೆ ಹಸ್ತಾಂತರ ಮಾಡಲಾಗುವುದು ಎಂದು ತಿಳಿದುಬಂದಿದೆ.

ಎಸಿಐ ಬ್ಯಾಂಕ್‍ನಲ್ಲಿ 1600 ಕೋಟಿ, ಪಂಜಾಬ್ ನ್ಯಾಷನಲ್ ಬ್ಯಾಂಕ್‍ನಲ್ಲಿ 800 ಕೋಟಿ, ಐಡಿಬಿಐ ಬ್ಯಾಂಕ್‍ನಲ್ಲಿ 800 ಕೋಟಿ, ಬ್ಯಾಂಕ್ ಆಫ್ ಬರೋಡಾದಲ್ಲಿ 550 ಕೋಟಿ, ಯುನೈಟೆಡ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 430 ಕೋಟಿ, ಯುಕೋ ಬ್ಯಾಂಕ್ 320 ಕೋಟಿ ಕಾರ್ಪೊರೇಷನ್ ಬ್ಯಾಂಕ್ 310 ಕೋಟಿ ರೂ.ಗಳ ಸಾಲ ಪಡೆದು ಮರುಪಾವತಿಸದೆ ತಲೆ ಮರೆಸಿಕೊಂಡಿದ್ದ.

ಕಳೆದ ಫೆಬ್ರವರಿಯಲ್ಲಿ ವಿಜಯ್ ಮಲ್ಯ ಅವರನ್ನು ಹಸ್ತಾಂತರಿಸುವಂತೆ ಭಾರತ ಮಾಡಿದ್ದ ಮನವಿಯನ್ನು ಬ್ರಿಟಿಷ್ ಸರ್ಕಾರ ಪುರಷ್ಕರಿಸಿದ್ದು, ಅದನ್ನು ವೆಸ್ಟ್ ಮಿನಿಸ್ಟರ್ಸ್ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ರವಾನಿಸಿತ್ತು.  ಭಾರತ–ಬ್ರಿಟನ್‌ ನಡುವಣ ಪರಸ್ಪರ ಕಾನೂನು ನೆರವು ಒಪ್ಪಂದ(ಎಂಎಲ್‌ಎಟಿ)ದ ಅಡಿಯಲ್ಲಿ ಮಲ್ಯ ಅವರನ್ನು ಹಸ್ತಾಂತರಿಸುವಂತೆ ಬ್ರಿಟನ್‌ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಅಧಿಕೃತವಾಗಿ ಮನವಿ ಮಾಡಿತ್ತು. ಅದನ್ನು ಬ್ರಿಟನ್ ಸರ್ಕಾರ ಪುರಷ್ಕರಿಸಿತ್ತು. ಅಲ್ಲದೆ ಮಲ್ಯ ವಿರುದ್ಧ ಬಂಧನ ವಾರಂಟ್ ಜಾರಿಗೊಳಿಸುವ ಬಗ್ಗೆ ಲಂಡನ್ ಕೋರ್ಟ್ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಹೇಳಿತ್ತು.

ಜಾಮೀನು :

ಲಂಡನ್ ನಲ್ಲಿ ಬಂಧನವಾಗಿದ್ದ ಮದ್ಯ ದೊರೆ ವಿಜಯ್ ಮಲ್ಯ ಅವರನ್ನು ವೆಸ್ಟ್ ಮಿನಿಸ್ಟರ್ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ಉದ್ಯಮಿ ವಿಜಯ್ ಮಲ್ಯ ಅವರಿಗೆ  ಕೋರ್ಟ್ ಜಾಮೀನು ಮಜೂರು ಮಾಡಿದೆ. ಬಂಧನಕ್ಕೊಳಗಾಗಿ 3 ಗಂಟೆಯ  ಅವಧಿಯಲ್ಲೇ ಮಲ್ಯ ಬಿಡುಗಡೆಯಾಗಿದ್ದಾರೆ

 

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin