ಕಳಪೆ ಆಹಾರದ ಬಗ್ಗೆ ಕಂಪ್ಲೇಂಟ್ ಮಾಡಿದ್ದ ತೇಜ್‍ಬಹದ್ದೂರ್ ಸೇವೆಯಿಂದ ವಜಾ

ಈ ಸುದ್ದಿಯನ್ನು ಶೇರ್ ಮಾಡಿ

Tej-Bahaddur BSF

ನವದೆಹಲಿ, ಏ.19- ಭಾರತೀಯ ಸೇನಾ ಪಡೆಯ ಯೋಧರಿಗೆ ಕಳಪೆ ಆಹಾರ ಪೂರೈಸಲಾಗುತ್ತಿದೆ ಎಂಬ ಸಂಗತಿಯನ್ನು ವೀಡಿಯೋ ಮಾಡಿ ಫೇಸ್‍ಬುಕ್‍ನಲ್ಲಿ ಅಪ್‍ಲೋಡ್ ಮಾಡಿ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದ್ದ ಬಿಎಸ್‍ಎಫ್ ಸೈನಿಕ ತೇಜ್‍ಬಹದ್ದೂರ್‍ನನ್ನು ಸೇವೆಯಿಂದ ವಜಾ ಮಾಡಲಾಗಿದೆ.ಹಲವಾರು ವಿವಾದಗಳಿಗೆ ಗುರಿಯಾಗಿರುವ ಬಹದ್ದೂರ್‍ನನ್ನು ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಉನ್ನತಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಿಬ್ಬಂದಿ ಕೋರ್ಟ್ ತನಿಖಾ ವರದಿಯನ್ನು ಆಧರಿಸಿ ಯಾದವ್ ಅವರನ್ನು ಕೆಲಸದಿಂದ ತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ ತೇಜ್ ಬಹದ್ದೂರ್ ಯಾದವ್ ಅವರು ಸೇನೆ ವಿರುದ್ಧ ಸುಳ್ಳು ಆರೋಪ ಮಾಡಿರುವುದು ತನಿಖೆಯ ವೇಳೆ ಪತ್ತೆಯಾಗಿದೆ ಎಂದು ಅವರು ಹೇಳಿದ್ದಾರೆ.  ಲವು ತಿಂಗಳುಗಳ ಹಿಂದೆ ತೇಜ್ ಬಹದ್ದೂರ್ ಯಾದವ್ ವಿಡಿಯೋ ಒಂದನ್ನು ಮಾಡಿ ಸಾಮಾಜಿಕ ಜಾಲತಾಣಗಳಿಗೆ ಪೋಸ್ಟ್ ಮಾಡಿದ್ದರು. ಈ ವಿಡಿಯೋದಲ್ಲಿ ಸೈನಿಕರಿಗೆ ಪೂರೈಸಲಾಗುತ್ತಿರುವ ಆಹಾರದ ಬಗ್ಗೆ ತೇಜ್ ಬಹದ್ದೂರ್ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಕುರಿತು ತನ್ನನ್ನು ಬೆಂಬಲಿಸುವಂತೆ ಪ್ರಧಾನಿ ನರೇಂದ್ರ ಮೋದಿಗೂ ಮನವಿಯನ್ನು ಸಲ್ಲಿಸಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin