ತೋಟದ ಮನೆಯಲ್ಲಿ ವಿದ್ಯುತ್ ತಗುಲಿ ಯುವಕ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

ತುರುವೇಕೆರೆ, ಏ.19- ವಿದ್ಯುತ್ ತಗುಲಿ ಯುವಕನೋರ್ವ ಸಾವನ್ನಪ್ಪಿರುವ ಘಟನೆ ತಾಲೂಕಿನ ದಬ್ಬೇಘಟ್ಟ ಹೋಬಳಿ ಬಿಗನೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅನಿಲ್ (25) ಮೃತ ದುರ್ದೈವಿ. ಈತ ತನ್ನ ತೋಟದ ಮನೆಯಲ್ಲಿನ ಮೋಟರ್ ಪಂಪ್‍ಸೆಟ್‍ನ ಸ್ಟಾಟರ್ ರಿಪೇರಿ ಮಾಡುವ ಸಂದರ್ಭದಲ್ಲಿ ವಿದ್ಯುತ್ ತಗುಲಿ ಸಾವನ್ನಪ್ಪಿದ್ದಾನೆ. ಪ್ರತಿ ಮಂಗಳವಾರ ಬೆಳಿಗ್ಗೆ 10 ರಿಂದ ಸಂಜೆ 5ರ ವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ವಿದ್ಯುತ್ ಬರುವುದಿಲ್ಲ ಎಂಬ ಭರವಸೆ ಮೇಲೆ ಸ್ಟಾಟರ್ ರಿಪೇರಿಯಲ್ಲಿ ತೊಡಗಿದ್ದ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin