ವೈಯಕ್ತಿಕ ದ್ವೇಷ, ಇಂಡಿ ತಾಲೂಕಿನ ತಡವಲಗಾ ಗ್ರಾಮದಲ್ಲಿ ವ್ಯಕ್ತಿಯ ಮೇಲೆ ಗುಂಡಿನ ದಾಳಿ

ಈ ಸುದ್ದಿಯನ್ನು ಶೇರ್ ಮಾಡಿ

Belagavi-Firing

ವಿಜಯಪುರ, ಏ.19- ವೈಯಕ್ತಿಕ ದ್ವೇಷದಿಂದ ವ್ಯಕ್ತಿಯೊಬ್ಬನ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ಹೂರ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಿನ್ನೆ ಸಂಜೆ ಜಿಲ್ಲೆಯ ಇಂಡಿ ತಾಲೂಕಿನ ತಡವಲಗಾ ಗ್ರಾಮದ ನಿವಾಸಿ ವಿಠ್ಠೋಬಾ ತಿಮ್ಮನಗೌಡ (65) ಎಂಬುವರು ಬೈಕ್‍ನಲ್ಲಿ ತೆರಳುತ್ತಿರುವಾಗ ದುಷ್ಕರ್ಮಿಗಳು ಏಕಾಏಕಿ ದಾಳಿ ನಡೆಸಿದ್ದಾರೆ. ತಿಮ್ಮನಗೌಡನ ಮೇಲೆ ಮೂರು ಸುತ್ತು ಗುಂಡು ಹಾರಿಸಿದ್ದು, ಭುಜಕ್ಕೆ ಗುಂಡು ತಗುಲಿದೆ. ಸುದ್ದಿ ತಿಳಿದ ಕೂಡಲೇ ಸ್ಥಳೀಯರು ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.



ಕೆಲವು ದಿನಗಳ ಹಿಂದೆ ಜಮೀನಿನಿಂದ ನೀರು ಪಡೆದುಕೊಳ್ಳುವ ವಿಚಾರಕ್ಕೆ ಶಾಂತಪ್ಪ ಎಂಬುವರ ಜತೆ ಜಗಳ ನಡೆದಿದ್ದು, ಈ ದಾಳಿಯನ್ನು ಅವರೇ ಮಾಡಿರಬಹುದೆಂದು ಕುಟುಂಬಸ್ಥರು ಪೊಲೀಸರಿಗೆ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin