ಪಂಚತಾರಾ ಹೊಟೇಲ್‍ಗಳಂತೆ ಬದಲಾಗುತ್ತಿರುವ ಖಾಸಗಿ ಆಸ್ಪತ್ರೆಗಳು : ರೋಷನ್‍ ಬೇಗ್ ವಿಷಾದ

ಈ ಸುದ್ದಿಯನ್ನು ಶೇರ್ ಮಾಡಿ

Roshan-Begh

ಬೆಂಗಳೂರು, ಏ.21– ಖಾಸಗಿ ಆಸ್ಪತ್ರೆಗಳು ಗುಣಮಟ್ಟದ ಚಿಕಿತ್ಸೆ ನೀಡುವುದಕ್ಕಿಂತ ಹೆಚ್ಚಾಗಿ ಪಂಚತಾರಾ ಹೊಟೇಲ್‍ಗಳ ರೀತಿ ಬದಲಾವಣೆಯಾಗುತ್ತಿವೆ ಎಂದು ನಗರಾಭಿವೃದ್ಧಿ ಸಚಿವ ರೋಷನ್‍ಬೇಗ್ ಇಂದಿಲ್ಲಿ ಬೇಸರ ವ್ಯಕ್ತಪಡಿಸಿದರು.   ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯ ನಗರದ ಖಾಸಗಿ ಹೊಟೇಲ್‍ನಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ ಕುರಿತು ಸ್ಥಳೀಯ ನಗರ ಸಂಸ್ಥೆಗಳ ಪ್ರತಿನಿಧಿಗಳಿಗೆ ಒಂದು ದಿನದ ಕಾರ್ಯಾಗಾರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.  ಖಾಸಗಿ ಆಸ್ಪತ್ರೆಗಳು ಬಡವರನ್ನು ಸುಲಿಗೆ ಮಾಡಿ ಹಣ ಗಳಿಸುವ ಆಸ್ಪತ್ರೆಗಳಾಗುತ್ತಿವೆ. ಇದು ಸರಿಯಲ್ಲ, ಬಡವರಿಗೆ ಗುಣಮಟ್ಟದ ಚಿಕಿತ್ಸೆ ಖಾಸಗಿ ಆಸ್ಪತ್ರೆಗಳಲ್ಲೂ ದೊರೆಯಬೇಕು.ಬಡವರ ಮೇಲೆ ಔಷಧಿಗಳ ಪ್ರಯೋಗ ಮಾಡುವುದು ಸರಿಯಲ್ಲ. ಶಾಸಕರು, ಸಚಿವರು ಮತ್ತು ಐಎಎಸ್ ಅಧಿಕಾರಿಗಳ ಮೇಲೆ ಆಸ್ಪತ್ರೆಗಳು ಕ್ಲಿನಿಕಲ್ ಪ್ರಯೋಗವನ್ನು ಏಕೆ ಮಾಡುವುದಿಲ್ಲ ಎಂದು ಪ್ರಶ್ನಿಸಿದ ಅವರು, ಕ್ಲಿನಿಕಲ್ ಪ್ರಯೋಗಕ್ಕೆ ಬಡವರೇ ಗುರಿಯಾಗಬೇಕೆ ಎಂದು ಬೇಸರ ವ್ಯಕ್ತಪಡಿಸಿದರು.  ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮುಖ್ಯ ಕಾರ್ಯದರ್ಶಿ ಡಾ.ರಾಜೇಶ್ವರ್‍ರಾವ್ ಮಾತನಾಡಿ, ಬೆಂಗಳೂರು ನಗರಕ್ಕೆ ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದಡಿ ಶೇ.50ರಷ್ಟು ಅನುದಾನ ನೀಡಲಾಗುವುದು. ಅದೇ ರೀತಿ ಇತರೆ ನಗರ ಸ್ಥಳೀಯ ಸಂಸ್ಥೆಗಳಿಗೂ ಶೇ.50ರಷ್ಟು ಅನುದಾನ ನೀಡಲಾಗುವುದು. ಈ ಅನುದಾನದಲ್ಲಿ ತಜ್ಞ ವೈದ್ಯರನ್ನು ನೇಮಕ ಮಾಡಿಕೊಳ್ಳಲು ಅವಕಾಶವಿದೆ ಎಂದರು.  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin