ಬಾಬ್ರಿ ಮಸೀದಿ ಧ್ವಂಸ ಪ್ರಕರಣವನ್ನು ಕಾನೂನಾತ್ಮಕವಾಗಿ ಎದುರಿಸಲು ಪಕ್ಷ ಸಿದ್ಧ : ಸದಾನಂದಗೌಡ

ಈ ಸುದ್ದಿಯನ್ನು ಶೇರ್ ಮಾಡಿ

sadananda

ಮಡಿಕೇರಿ, ಏ.21- ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬಿಜೆಪಿ ನಾಯಕರು ವಿಚಾರಣೆಗೆ ಹಾಜರಾಗಲಿದ್ದಾರೆ. ಇದರಲ್ಲಿ ಯಾವುದೇ ರಾಜಕೀಯ ಇಲ್ಲ. ಇದನ್ನು ಕಾನೂನಾತ್ಮಕವಾಗಿ ಎದುರಿಸಲು ಪಕ್ಷ ಸಿದ್ಧವಾಗಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಇಂದಿಲ್ಲಿ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಾರು 25 ವರ್ಷಗಳ ಹಿಂದಿನ ಬಾಬ್ರಿ ಮಸೀದಿ ಪ್ರಕರಣದ ವಿಚಾರಣೆ ಇಂದು ನಡೆಯಲಿದ್ದು, ಬಿಜೆಪಿ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ ಸೇರಿದಂತೆ ಮತ್ತಿತರ ನಾಯಕರು ವಿಚಾರಣೆಗೆ ಹಾಜರಾಗುತ್ತಾರೆ. ಈ ನಿಟ್ಟಿನಲ್ಲಿ ಸಚಿವೆ ಉಮಾಭಾರತಿ ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದರು.ಕಾಂಗ್ರೆಸ್ ಜತೆ ಮೈತ್ರಿ-ಅವನತಿ ಖಾತ್ರಿ:

ಕಾಂಗ್ರೆಸ್ ಜತೆ ಯಾವುದೇ ಪಕ್ಷ ಮೈತ್ರಿ ಮಾಡಿಕೊಂಡರೂ ನಾಶವಾಗುತ್ತದೆ. ಈ ಹಿಂದೆ ಮೈತ್ರಿ ಮಾಡಿಕೊಂಡ ಪಕ್ಷಗಳು ನಾಶವಾಗಿವೆ. ಮುಂದೆಯೂ ಕೂಡ ಮೈತ್ರಿ ಮಾಡಿಕೊಂಡರೆ ಪಕ್ಷ ನಾಶವಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಕಾಂಗ್ರೆಸ್ ಪಕ್ಷವನ್ನು ಲಘುವಾಗಿ ಟೀಕಿಸಿದರು.

ಬರ ಪರಿಹಾರ ಹಂಚಿಕೆಯಲ್ಲಿ ವಿಫಲ:

ರಾಜ್ಯದಲ್ಲಿ ತಲೆದೋರಿರುವ ಭೀಕರ ಬರಗಾಲವನ್ನು ನಿವಾರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈಗಾಗಲೇ ಅನುದಾನ ನೀಡಿದೆ. ಆದರೆ, ರಾಜ್ಯ ಸರ್ಕಾರ ಬರ ಪರಿಹಾರ ವಿತರಣೆ ಮಾಡುವಲ್ಲಿ ವಿಫಲವಾಗಿದೆ. ಅಲ್ಲದೆ, ಬರ ಪರಿಸ್ಥಿತಿ ಸರಿದೂಗಿಸಲು ಅಗತ್ಯ ಕ್ರಮ ತೆಗೆದುಕೊಳ್ಳುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಅವರು ಆರೋಪಿಸಿದರು. ಬಿಜೆಪಿ ಪಕ್ಷದಲ್ಲಿ ಭಿನ್ನಾಭಿಪ್ರಾಯವಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯ ಬಿಜೆಪಿ ಘಟಕದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಈ ಹಿಂದೆ ರಾಷ್ಟ್ರೀಯ ಬಿಜೆಪಿ ವರಿಷ್ಠರು ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ರಾಜ್ಯ ಘಟಕಕ್ಕೆ ಕೆಲವೊಂದು ಸೂತ್ರಗಳನ್ನು ನೀಡಿದ್ದರು. ಈ ಸೂತ್ರಗಳನ್ನು ಅಳವಡಿಸಲು ಕೆಲವು ನಾಯಕರು ಸಲಹೆ ನೀಡಿದ್ದಾರೆ. ಇದು ತಪ್ಪೇ ಎಂದು ಪ್ರಶ್ನಿಸಿದ ಅವರು, ಸೂತ್ರಗಳನ್ನು ಅಳವಡಿಸುವಂತೆ ಸೂಚಿಸಲು ವರಿಷ್ಠರ ಮೊರೆ ಹೋಗುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಹೇಳಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin