ಮೇ 15ರೊಳಗೆ ಕರಗಡ ಏತ ನೀರಾವರಿ ಯೋಜನೆ ಪೂರ್ಣ

ಈ ಸುದ್ದಿಯನ್ನು ಶೇರ್ ಮಾಡಿ

PARAMESHWAR

ಚಿಕ್ಕಮಗಳೂರು, ಏ.21- ಜಿಲ್ಲೆಯ 300 ಹಳ್ಳಿಗಳಿಗೆ ಹಾಗೂ 11 ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಿಗೆ ನೀರುಣಿಸುವ ಕರಗಡ ಏತ ನೀರಾವರಿ ಯೋಜನೆ ಮೇ 15ರೊಳಗೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.ಇಂದು ಬೆಳಗ್ಗೆ ಕರಗಡ ಏತ ನೀರಾವರಿ ಕಾಮಗಾರಿಗಳನ್ನು ವೀಕ್ಷಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಜನೆ ಕಾಮಗಾರಿಗೆ ಸರ್ಕಾರ ಈಗಾಗಲೇ ಹಣ ಬಿಡುಗಡೆ ಮಾಡಿದೆ. ಕಾಮಗಾರಿ ಪೂರ್ಣಗೊಳಿಸಲು ಸಮಯ ಮುಗಿದಿದ್ದು, ಯಾವುದೇ ಕಾರಣಕ್ಕೂ ಮುಂದೂಡುವ ಪ್ರಶ್ನೆಯೇ ಇಲ್ಲ. ಮೇ 15ರೊಳಗೆ ಕಾಮಗಾರಿ ಪೂರ್ಣಗೊಳಿಸಬೇಕು. ಮೇ ಅಂತ್ಯದೊಳಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಉದ್ಘಾಟನೆ ನೆರವೇರಿಸಲಾಗುವುದು ಎಂದರು.

ಬಾಬಾ ಬುಡನ್‍ಗಿರಿ ಇನಾಂ ದತ್ತ ಪೀಠ ವಿವಾದ ಇತ್ಯರ್ಥ ಪಡಿಸುವ ನಿಟ್ಟಿನಲ್ಲಿ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರ ನೇತೃತ್ವದಲ್ಲಿ ಉಪ ಸಮಿತಿ ರಚನೆಯಾಗಿದೆ. ಸುಪ್ರೀಂ ಕೋರ್ಟ್ 6 ವಾರಗಳ ಒಳಗೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಂತೆ ಆದೇಶ ಮಾಡಿರುವ ಹಿನ್ನೆಲೆಯಲ್ಲಿ ಮುಂದಿನ ವಾರದಲ್ಲೇ ಉಪ ಸಮಿತಿಯ ತಂಡ ದತ್ತ ಪೀಠಕ್ಕೆ ಭೇಟಿ ನೀಡಲಿದೆ. ನ್ಯಾಯಾಲಯದ ಆದೇಶದ ಸಾಧಕ-ಬಾಧಕಗಳನ್ನು ಚರ್ಚಿಸಿ ವರದಿ ತಯಾರಿಸಿ ಸಚಿವ ಸಂಪುಟಕ್ಕೆ ಸಲ್ಲಿಸಲಾಗುವುದು ಎಂದರು.  ಮುಂಬರುವ 2018ರ ವಿಧಾನಸಭೆ ಚುನಾವಣೆಯಲ್ಲಿ ಸಾಮೂಹಿಕ ನಾಯಕತ್ವದಡಿ ನಡೆಸುತ್ತೇವೆ. ನಮ್ಮದೇ ಆಡಳಿತ ಇರುವುದರಿಂದ 124 ಶಾಸಕರ ನೇತೃತ್ವದಲ್ಲಿ ಪಕ್ಷ ಸಂಘಟನೆ ಮಾಡಲಿದ್ದೇವೆ. ಯಾವುದೇ ಪಕ್ಷದ ಜತೆ ಮೈತ್ರಿ ಮಾಡಕೊಳ್ಳುವುದಿಲ್ಲ ಎಂದು ತಿಳಿಸಿದರು.ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಸದ್ಯ ಕೆಪಿಸಿಸಿ ಅಧ್ಯಕ್ಷನಾಗಿದ್ದೇನೆ ಎಂದ ಅವರು, ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದು ತಿಳಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin