ತಮಿಳುನಾಡಿನಲ್ಲಿ ಕನ್ನಡ ಚಿತ್ರಪ್ರದರ್ಶನವಾಗುವವರೆಗೂ ತಮಿಳು ಚಿತ್ರಗಳಿಗೆ ಅವಕಾಶ ಕೊಡಬಾರದು : ಹುಚ್ಚ ವೆಂಕಟ್

ಈ ಸುದ್ದಿಯನ್ನು ಶೇರ್ ಮಾಡಿ

huchcha-venkat

ಬೆಂಗಳೂರು,ಏ.22-ತಮಿಳುನಾಡಿನಲ್ಲಿ ಕನ್ನಡ ಚಿತ್ರಪ್ರದರ್ಶನ ವಾಗುವವರೆಗೂ ರಾಜ್ಯದಲ್ಲಿ ತಮಿಳು ಚಿತ್ರ ಪ್ರದರ್ಶನಕ್ಕೆ ಅವಕಾಶ ಕೊಡಬಾರದು ಎಂದು ನಟ ಹುಚ್ಚ ವೆಂಕಟ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾವೇರಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ನಟ ಸತ್ಯರಾಜ್ ಕ್ಷಮೆ ಕೇಳಿದ್ದಾರೆ ಎಂಬ ಕಾರಣಕ್ಕೆ ತಮಿಳುನಾಡಿನಲ್ಲಿ ಕನ್ನಡ ಚಿತ್ರ ಪ್ರದರ್ಶನ ರದ್ದುಗೊಳಿಸಿದ್ದಾರೆ.



ಹೀಗಾಗಿ ಕರ್ನಾಟಕದಲ್ಲಿ ಥಿಯೇಟರ್ ಮಾಲೀಕರು ತಮಿಳು ಚಿತ್ರ ಪ್ರದರ್ಶನ ಮಾಡಬಾರದು ಎಂದು ಮನವಿ ಮಾಡಿದ್ದಾರೆ.   ಚಿತ್ರ ನಿರ್ದೇಶಕ ರಾಜಮೌಳಿ ಕೂಡ ಬಾಹುಬಲಿ-2 ಚಿತ್ರ ಬಿಡುಗಡೆಗೆ ಅನುವು ಮಾಡಿಕೊಡಬೇಕೆಂದು ಕನ್ನಡಿಗರಿಗೆ ಮನವಿ ಮಾಡಿದ್ದಾರೆ. ಅಲ್ಲದೆ ನಿನ್ನೆ ನಟ ಸತ್ಯರಾಜ್ ಈ ವಿವಾದದ ಬಗ್ಗೆ ಕ್ಷಮೆ ಕೋರಿದ್ದಾರೆ. ಹೀಗಾಗಿ ಬಾಹುಬಲಿ-2 ಚಿತ್ರ ಬಿಡುಗಡೆಗೆ ಅವಕಾಶ ನೀಡಬೇಕು ಎಂದು ಅವರು ತಿಳಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin