ನಾಳೆ ದೇವೇಗೌಡರಿಗೆ ಅವಧೂತ ಪ್ರಶಸ್ತಿ ಪ್ರದಾನ

ಈ ಸುದ್ದಿಯನ್ನು ಶೇರ್ ಮಾಡಿ

Devegowda-nJDS---01
ತುಮಕೂರು/ಬೆಂಗಳೂರು,ಏ.22-ಶಿರಾ ತಾಲ್ಲೂಕಿನ ಪಟ್ಟನಾಯಕನ ಹಳ್ಳಿಯ ಸ್ಫಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಂಜಾವಧೂತ ಶ್ರೀಗಳ 38ನೇ ವರ್ಧಂತಿ ಮಹೋತ್ಸವವನ್ನು ಶಾಶ್ವತ ನೀರಾವರಿ ಹಕ್ಕೋತ್ತಾಯ ಸಮಾವೇಶವನ್ನಾಗಿ ನಾಳೆ ಆಚರಿಸಲಾಗುತ್ತಿದೆ. ಮಧ್ಯ ಕರ್ನಾಟಕದ ಕಾವೇರಿ ಮತ್ತು ಕೃಷ್ಣ ಕೊಳ್ಳದಲ್ಲಿನ ರೈತರಿಗೆ ಶಾಶ್ವತ ನೀರಾವರಿ ಯೋಜನೆಗಾಗಿ ಒತ್ತಾಯಿಸಲು ಶ್ರೀಗಳ ವರ್ಧಂತಿ ಮಹೋತ್ಸವವನ್ನು ಶಾಶ್ವತ ನೀರಾವರಿ ಹಕ್ಕೋತ್ತಾಯ ಸಮಾವೇಶವನ್ನಾಗಿ ಆಚರಿಸಲು ಭಕ್ತರು ನಿರ್ಧರಿಸಿದ್ದಾರೆ.ಇದೇ ಸಂದರ್ಭದಲ್ಲಿ ರಾಷ್ಟ್ರದ ಮತ್ತು ರಾಜ್ಯದ ನೀರಾವರಿ ಸಮಸ್ಯೆಗಳ ಪರಿಹಾರಕ್ಕೆ ನೀಡಿರುವ ಕೊಡುಗೆಗಾಗಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ.ದೇವೇಗೌಡ ಅವರಿಗೆ ಶ್ರೀ ಅವಧೂತ ಪ್ರಜ್ಞಾ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಶ್ರೀ ಸ್ಫಟಿಕಪುರಿ ಆವರಣದಲ್ಲಿ ನಾಳೆ ಬೆಳಗ್ಗೆ 10 ಗಂಟೆಗೆ ಸಮಾವೇಶ ಆರಂಭವಾಗಲಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹಾಗೂ ಇಂಧನ ಸಚಿವ ಡಿ.ಕೆ.ಶಿವಕುಮಾರ್ ನೆರವೇರಿಸ ಲಿದ್ದು, ಶ್ರೀ ನಂಜಾವಧೂತ ಸ್ವಾಮೀಜಿಗಳ ದಿವ್ಯಸಾನಿಧ್ಯ ವಹಿಸಲಿದ್ದಾರೆ.

ಸಮಾವೇಶದ ಅಧ್ಯಕ್ಷತೆಯನ್ನು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ. ನಿರ್ಮಲಾನಂದನಾಥ ಸ್ವಾಮೀಜಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ವಸತಿ ಸಚಿವ ಎಂ.ಕೃಷ್ಣಪ್ಪ , ಆಂಧ್ರಪ್ರದೇಶದ ಕಾಂಗ್ರೆಸ್ ಅಧ್ಯಕ್ಷ ಎಂ.ರಘುವೀರ್, ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ, ಸಂಸದ ಮುದ್ದಹನುಮೇಗೌಡ, ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್ ಸೇರಿದಂತೆ ಮತ್ತಿತರ ಮುಖಂಡರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

ಬರದಿಂದ ತತ್ತರಿಸಿರುವ ಮಧ್ಯ ಕರ್ನಾಟಕದ ಜಿಲ್ಲೆಗಳಿಗೆ ಶಾಶ್ವತವಾಗಿ ಕುಡಿಯುವ ನೀರು ಒದಗಿಸುವಂತೆ ರಾಜ್ಯ ಸರ್ಕಾರದ ಗಮನ ಸೆಳೆಯುವುದು ಈ ಸಮಾವೇಶದ ಮುಖ್ಯ ಉದ್ದೇಶ ವಾಗಿದ್ದು, ನಾಳೆ ನಡೆಯಲಿರುವ ಕಾರ್ಯಕ್ರಮಕ್ಕೆ ಅಪಾರ ಭಕ್ತರು, ಸಾರ್ವಜನಿಕರು ಆಗಮಿಸ ಲಿರುವುದರಿಂದ ಆಸನದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಜಿಪಂ ಸದಸ್ಯ ಎಸ್.ರಾಮಕೃಷ್ಣಪ್ಪ ಈ ಸಂಜೆಗೆ ತಿಳಿಸಿದ್ದಾರೆ. ಈ ಸಮಾವೇಶದ ಪೂರ್ವಭಾವಿಯಾಗಿ ಬೆಂಗಳೂರಿನ ಪುರಭವನದ ಮುಂದೆ ಏ.20ರ ಸಂಜೆ ನೀರಿಗಾಗಿ ಬೆಳಕು ಚೆಲ್ಲಿ ಎಂಬ ಅರಿವು ಮೂಡಿಸುವ ಕಾರ್ಯಕ್ರಮವನ್ನು ನಡೆಸಲಾಯಿತು. ಮೇಣದ ಬತ್ತಿ ಬೆಳಕನ್ನು ಪ್ರದರ್ಶಿಸುವ ಮೂಲಕ ನೀರಾವರಿ ಯೋಜನೆ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ವನ್ನು ನಂಜಾವಧೂತ ಶ್ರೀಗಳ ಭಕ್ತರು ಮಾಡಿದ್ದರು. ಮಧ್ಯ ಕರ್ನಾಟಕ ಶಾಶ್ವತ ನೀರಾವರಿ ಹಕ್ಕೋತ್ತಾಯ ಸಮಾವೇಶಕ್ಕೆ ಬೆಂಬಲವಾಗಿ ನೀರಿಗಾಗಿ ಬೆಳಕು ಚೆಲ್ಲಿ ಎಂಬ ಕಾರ್ಯಕ್ರಮವನ್ನು ಗುರುವಂದನಾ ಸಮಿತಿ ನಡೆಸಿತ್ತು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin