ಜಮೀನಿನಲ್ಲಿ ಕೆಲಸ ಮಾಡುವಾಗ ನಾಯಿಕಚ್ಚಿ ಯುಕನ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

dog

ರಾಮನಗರ, ಏ.24- ಜಮೀನಿನಲ್ಲಿ ಕೆಲಸ ಮಾಡುವಾಗ ನಾಯಿಕಚ್ಚಿ ಅಸ್ವಸ್ಥಗೊಂಡಿದ್ದ ಯುವಕ ಮೃತಪಟ್ಟಿರುವ ಘಟನೆ ತಾಲೂಕಿನ ಕೈಲಾಂಚ ಹೋಬಳಿ ಲಕೋಜನಹಳ್ಳಿಯಲ್ಲಿ ನಡೆದಿದೆ.ದಿನೇಶ್ (28) ಮೃತ ಯುವಕ.ಕಳೆದ ಕೆಲ ದಿನಗಳ ಹಿಂದೆ ಜಮೀನಿನಲ್ಲಿ ಕೆಲಸ ಮಾಡುವಾಗ ನಾಯಿಯೊಂದು ಆತನಿಗೆ ಕಚ್ಚಿತ್ತು. ನಂತರ ಅವರು ಆಸ್ಪತ್ರೆಗೆ ತೆರಳಿ ಚುಚ್ಚುಮದ್ದು ತೆಗೆದುಕೊಂಡಿದ್ದರು.ಆದರೂ ಅವರಿಗೆ ಯಾವುದೋ ಸೋಂಕು ತಗುಲಿರುವ ಬಗ್ಗೆ ಅನುಮಾನಗೊಂಡು ವೈದ್ಯರು ಪರೀಕ್ಷಿಸಿದಾಗ ರೇಬಿಸ್ ರೋಗ ಅಂಟಿರುವುದು ಗೊತ್ತಾಗಿ ತುರ್ತು ಚಿಕಿತ್ಸೆ ನೀಡಿದ್ದಾರೆ.ಹೆಚ್ಚಿನ ಚಿಕಿತ್ಸೆಗಾಗಿ ಆತನನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ದಿನೇಶ್ ಅಸುನೀಗಿದ್ದಾನೆ ಎಂದು ಪೋಷಕರು ತಿಳಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin