ರಾಷ್ಟ್ರಪತಿ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪರ್ಧೆ : ಮಲ್ಲಿಕಾರ್ಜುನ ಖರ್ಗೆ

ಈ ಸುದ್ದಿಯನ್ನು ಶೇರ್ ಮಾಡಿ

mallikarjun-kharge

ಕಲಬುರಗಿ,ಏ.24-ಮುಂದಿನ ರಾಷ್ಟ್ರಪತಿ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಇನ್ನು ಚರ್ಚೆಯಾಗಿಲ್ಲ. ಎಲ್ಲರ ಒಮ್ಮತ ಪಡೆದು ಕಾಂಗ್ರೆಸ್‍ನಿಂದ ಸೂಕ್ತ ಅಭ್ಯರ್ಥಿಯನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸ್ಪರ್ಧಿಸುವುದು ಒಂದು ಭಾಗ. ಈ ಬಗ್ಗೆ ಸದ್ಯದಲ್ಲಿಯೇ ತೀರ್ಮಾನ ಕೈಗೊಳ್ಳಲಾಗುವುದು. ಇನ್ನೊಂದು ಭಾಗವಾಗಿ ಎಲ್ಲರೂ ಒಟ್ಟಾಗಿ ಒಮ್ಮತದಿಂದ ರಾಷ್ಟ್ರಪತಿಯನ್ನು ಆಯ್ಕೆ ಮಾಡಲು ಪ್ರಧಾನಿ  ನರೇಂದ್ರ ಮೋದಿಯವರನ್ನು ಕೂಡ ಸಂಪರ್ಕಿಸಿ ಮಾತುಕತೆ ನಡೆಸುತ್ತೇನೆ ಎಂದು ಹೇಳಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin