ಸಾಲ ಬಾಧೆಗೆ ನೊಂದ ರೈತ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

farmers

ಮಂಡ್ಯ,ಏ.24- ಸಾಲ ಬಾಧೆಗೆ ನೊಂದ ರೈತನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಾಂಡವಪುರ ತಾಲ್ಲೂಕಿನ ಚಿನಕುರಳಿ ಗ್ರಾಮದಲ್ಲಿ ನಡೆದಿದೆ. ರಾಮಕೃಷ್ಣೇಗೌಡ(55) ಆತ್ಮಹತ್ಯೆ ಮಾಡಿಕೊಂಡ ರೈತ. ಕೃಷಿಯನ್ನೇ ನೆಚ್ಚಿಕೊಂಡು ಜೀವನ ಸಾಗಿಸುತ್ತಿದ್ದ ರಾಮಕೃಷ್ಣೇಗೌಡ ತನಗಿದ್ದ ಮೂರು ಎಕರೆ 20 ಗುಂಟೆ ಜಮೀನಿನಲ್ಲಿ ವ್ಯವಸಾಯ ಮಾಡುತ್ತಿದ್ದರು. ಮಳೆ ಸತತವಾಗಿ ಕೈ ಕೊಡುತ್ತಿದ್ದ ಕಾರಣ ತಮ್ಮ ಜಮೀನಿನಲ್ಲಿ ಬೋರ್‍ವೆಲ್ ಕೊರೆಸಲು ಎಸ್‍ಬಿಐ ಬ್ಯಾಂಕ್, ಇತರೆ ಸಹಕಾರಿ ಬ್ಯಾಂಕ್‍ಗಳಲ್ಲಿ ಒಟ್ಟು 4 ಲಕ್ಷ ಹಾಗೂ ಇತರರಿಂದ 3 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು.

ಮೂರು ಕೊಳವೆ ಬಾವಿಗಳನ್ನು ಕೊರೆಸಿದ್ದರೂ ಕೂಡ ನೀರು ಸಿಕ್ಕಿರಲಿಲ್ಲ.ಇದರಿಂದ ಅವರಿಗೆ ಸುಮಾರು 7 ಲಕ್ಷ ನಷ್ಟ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಸಾಲ ತೀರಿಸುವ ಬಗ್ಗೆ ಚಿಂತೆಗೀಡಾಗಿದ್ದರು. ನಿನ್ನೆ ಮನೆಯಲ್ಲಿ ಯಾರು ಇಲ್ಲದ ವೇಳೆ ರಾಮಕೃಷ್ಣೇಗೌಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರಿಗೆ ಒಬ್ಬ ಮಗಳು, ಒಬ್ಬ ಮಗ ಇದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin