ಬಾಂಬ್ ಸ್ಫೋಟ : ಆರು ಮಕ್ಕಳು, ಇಬ್ಬರು ಮಹಿಳೆಯರೂ ಸೇರಿದಂತೆ 12 ಮಂದಿ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Pakistan-Blast

ಪೇಶಾವರ್, ಏ.25- ಪ್ರಯಾಣಿಕರ ವ್ಯಾನೊಂದರ ಬಳಿ ಬಾಂಬ್ ಸ್ಫೋಟಗೊಂಡು ಆರು ಮಕ್ಕಳು, ಇಬ್ಬರು ಮಹಿಳೆಯರೂ ಸೇರಿದಂತೆ 12 ಮಂದಿ ಮೃತಪಟ್ಟು, ಅನೇಕರು ಗಾಯಗೊಂಡಿರುವ ಘಟನೆ ಪಾಕಿಸ್ತಾನದ ಹಿಂಸಾಚಾರಪೀಡಿತ ವಾಯುವ್ಯ ಬುಡಕಟ್ಟು ಪ್ರಾಂತ್ಯದಲ್ಲಿ ಸಂಭವಿಸಿದೆ.



ಸೆಂಟ್ರಲ್ ಕುರ್ರಂ ಪ್ರದೇಶದ ಕೊಂಟಾರಾ ಗ್ರಾಮದಲ್ಲಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಗೊಂಡು ಈ ದುರಂತ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ದುರಂತದಲ್ಲಿ 13 ಜನ ಗಾಯಗೊಂಡಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin