ಮದುವೆ, ಸಮಾರಂಭಗಳಲ್ಲಿ ಆಹಾರ ವ್ಯರ್ಥ ತಡೆಗೆ ಹೊಸ ನಿಯಮ

ಈ ಸುದ್ದಿಯನ್ನು ಶೇರ್ ಮಾಡಿ

u-t--kadhar

ಬೆಂಗಳೂರು,ಏ.25-ಮದುವೆ, ಸಭೆ-ಸಮಾರಂಭಗಳ ವೇಳೆ ಹೋಟೆಲ್‍ನಲ್ಲಿ ಆಹಾರ ವ್ಯರ್ಥ ಮಾಡುವುದನ್ನು ತಪ್ಪಿಸಲು ಸರ್ಕಾರ ನೂತನ ನಿಯಮ ಜಾರಿಗೆ ತರಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಹಾರ ಹಾಳು ಮಾಡುವ ಹಕ್ಕು ಯಾರಿಗೂ ಇಲ್ಲ. ಹೋಟೆಲ್‍ನಲ್ಲಿ ಸಭೆ-ಸಮಾರಂಭ, ಮದುವೆ ನಡೆಯುವಾಗ ಸಾಕಷ್ಟು ಆಹಾರ ವ್ಯಥ್ರ್ಯವಾಗತ್ತದೆ. ಇದನ್ನು ತಪ್ಪಿಸಲು ಜನಜಾಗೃತಿ ಮೂಡಿಸಿ ನಿಯಮವೊಂದನ್ನು ಜಾರಿಗೆ ತರಲಾಗುವುದು ಎಂದರು.



ನಿಯಮ ರೂಪಿಸುವ ಮುನ್ನ ಈ ವಿಚಾರದಲ್ಲಿ ಕೆಲಸ ಮಾಡುತ್ತಿರುವ ಸಂಘಸಂಸ್ಥೆಗಳ ಜೊತೆ ಚರ್ಚೆ ಮಾಡಲಾಗುವುದು. ಹೋಟೆಲ್ ಮತ್ತು ರೆಸ್ಟೋರೆಂಟ್‍ಗಳಲ್ಲಿ ಸೇವಾ ಶುಲ್ಕ ವಿಧಿಸುವುದನ್ನು ಕೇಂದ್ರ ಸರ್ಕಾರ ರದ್ದು ಮಾಡಿದೆ. ಅದಕ್ಕೆ ಪೂರಕವಾಗಿ ರಾಜ್ಯದಲ್ಲಿ ಸೂಕ್ತ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದರು. ಶೇ.6ರಿಂದ 8ರಷ್ಟು ಸೇವಾ ಶುಲ್ಕವನ್ನು ವಿಧಿಸಲಾಗುತ್ತಿದೆ. ಗ್ರಾಹಕರಿಗೆ ಶುಲ್ಕ ವಿಧಿಸುವುದನ್ನು ತಡೆಯಲು ಆಹಾರ ಇಲಾಖೆಯು ಬಿಲ್ ಸೆಟ್ ನೀಡಲಾಗುವುದು. ಈ ಬಗ್ಗೆ ಹೋಟೆಲ್, ರೆಸ್ಟೋರೆಂಟ್ ಮಾಲೀಕರ ಜೊತೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin