ಕೃಷಿ ಆದಾಯದ ಮೇಲೆ ತೆರಿಗೆ ಇಲ್ಲ : ಕೇಂದ್ರ ಸ್ಪಷ್ಟನೆ

ಈ ಸುದ್ದಿಯನ್ನು ಶೇರ್ ಮಾಡಿ

Arun

ನವದೆಹಲಿ, ಏ.26-ತೆರಿಗೆ ವಂಚನೆಯನ್ನು ತಪ್ಪಿಸುವ ಉದ್ದೇಶದಿಂದ ಕೃಷಿ ಆದಾಯದ ಮೇಲೆ ತೆರಿಗೆ ವಿಧಿಸಲಾಗುತ್ತದೆ ಎಂಬ ವರದಿಗಳನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ತಳ್ಳಿ ಹಾಕಿದ್ದಾರೆ.   ಕೃಷಿ ವರಮಾನದ ಮೇಲೆ ಯಾವುದೇ ತೆರಿಗೆಗಳನ್ನು ವಿಧಿಸುವ ಯೋಜನೆ ಕೇಂದ್ರ ಸರ್ಕಾರದ ಮುಂದೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಟ್ವೀಟರ್‍ನಲ್ಲಿ ಈ ವಿಷಯ ತಿಳಿಸಿರುವ ಅವರು, ಸಂವಿಧಾನದಲ್ಲಿ ಪ್ರದತ್ತವಾದ ಅಧಿಕಾರದಂತೆ, ಕೃಷಿ ವರಮಾನದ ಮೇಲೆ ತೆರಿಗೆ ವಿಧಿಸುವ ಅಧಿಕಾರ ವ್ಯಾಪ್ತಿಯು ಕೇಂದ್ರ ಸರ್ಕಾರಕ್ಕೆ ಇಲ್ಲ ಎಂದು ಹೇಳಿದರು.

ತೆರಿಗೆ ಆಧಾರವನ್ನು ವಿಸ್ತರಿಸುವ ಕಾರ್ಯತಂತ್ರದ ಭಾಗವಾಗಿ ನಿರ್ದಿಷ್ಟ ಹಂತದ ನಂತರ ಕೃಷಿ ವರಮಾನದ ಮೇಲೆ ತೆರಿಗೆ ವಿಧಿಸುವ ಹಾಗೂ ವೈಯಕ್ತಿಕ ಆದಾಯ ತೆರಿಗೆ ವಿನಾಯಿತಿಯನ್ನು ತೆಗೆದುಹಾಕುವ ಬಗ್ಗೆ ನೀತಿ ಆಯೋಗ ಶಿಫಾರಸು ಮಾಡಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin