ಕೆಪಿಸಿಸಿ ಅಧ್ಯಕ್ಷ ಸ್ಥಾನ ಉತ್ತರ ಕರ್ನಾಟಕಭಾಗಕ್ಕೆ ಸಿಗಲಿ : ಎಸ್.ಆರ್. ಪಾಟೀಲ್

ಈ ಸುದ್ದಿಯನ್ನು ಶೇರ್ ಮಾಡಿ

s-r-patil

ಬೆಂಗಳೂರು,ಏ.26-ಕೆಪಿಸಿಸಿ ಅಧ್ಯಕ್ಷ ಸ್ಥಾನ ಉತ್ತರ ಕರ್ನಾಟಕ ಭಾಗದವರಿಗೆ ಸಿಗಬೇಕೆಂದು ಮಾಜಿ ಸಚಿವ ಎಸ್.ಆರ್. ಪಾಟೀಲ್  ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಅವರಿಗಾದರೂ ಸಾರಥ್ರ್ಯ ನೀಡಲಿ ಅಥವಾ ಇನ್ನಾರಿಗಾದರೂ ಸರಿ. ಆದರೆ ಉತ್ತರ ಕರ್ನಾಟಕ ಭಾಗಕ್ಕೆ ನೀಡಬೇಕೆಂದು ಒತ್ತಾಯಿಸಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಭಾಗದವರು, ಕೆಪಿಸಿಸಿ ಕಾರ್ಯಾ ಧ್ಯಕ್ಷರಾದ ದಿನೇಶ್ ಗುಂಡೂರಾವ್ ಅವರು ದಕ್ಷಿಣ ಕನ್ನಡದವರು ಹೀಗಾಗಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸಮಯದಲ್ಲಿ ಉತ್ತರ ಕರ್ನಾಟಕ ಭಾಗದವರನ್ನು ಪರಿಗಣಿಸಬೇಕು. ಸಿಎಂ ಅವರಿಗೆ ನನ್ನ ಬಗ್ಗೆ ಒಲವು ಇದೆ. ನಾನು ಎಂದಿಗೂ ಕುರ್ಚಿಗೆ ಆಸೆ ಪಟ್ಟವನಲ್ಲ ಎಂದು ಹೇಳಿದರು.ಕಾಂಗ್ರೆಸ್‍ನಲ್ಲಿ ಅತಿ ಹೆಚ್ಚು ಶಾಸಕರಿರುವುದು ಉತ್ತರ ಕರ್ನಾಟಕದವರು. ತಾವು ಸಚಿವ ಹಾಗೂ ಅಧ್ಯಕ್ಷ ಸ್ಥಾನಗಳನ್ನು ಕೊಡಿ ಎಂದು ಬೇಡಿಕೆ ಇಟ್ಟಿಲ್ಲ. ಆದರೆ ಯಾವುದೇ ಹುದ್ದೆ ನೀಡಿದರೂ ಜವಾಬ್ದಾರಿಯಿಂದ ನಿಭಾಯಿಸುತ್ತೇನೆ. ಹೈಕಮಾಂಡ್ ಇದರ ಬಗ್ಗೆ ಒಲವು ತೋರಿಸಬೇಕು. ಒಂದು ವೇಳೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ಟರೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಹೆಚ್ಚು ಸ್ಥಾನ ಗೆಲ್ಲಿಸಿ ಮತ್ತೆ ಪಕ್ಷ ಅಧಿಕಾರಕ್ಕೆ ತರಲು ಶ್ರಮಿಸುವುದಾಗಿ ತಿಳಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin