ಶಿವಮೊಗ್ಗದಲ್ಲಿ ನಡು ರಸ್ತೆಯಲ್ಲೇ ಮಹಿಳೆಯ ಕತ್ತು ಕೊಯ್ದು ಕೊಲೆ

ಈ ಸುದ್ದಿಯನ್ನು ಶೇರ್ ಮಾಡಿ

Murder-002

ಶಿವಮೊಗ್ಗ, ಏ.26- ನಡು ರಸ್ತೆಯಲ್ಲೇ ಮಹಿಳೆಯೊಬ್ಬರ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಹಾದಿನಗರದಲ್ಲಿ ನಡೆದಿದೆ. ಸುಮಾರು 30 ವರ್ಷದ ಮಹಿಳೆ ರಕ್ತದ ಮಡುವಿನಲ್ಲಿ ಬಿದ್ದಿದ್ದು, ಅದರ ಪಕ್ಕದಲ್ಲೇ ಸುಮಾರು 2 ವರ್ಷದ ಮಗು ಅಳುತ್ತಿರುವುದನ್ನು ನೋಡಿ ಸ್ಥಳೀಯರು ತುಂಗಾ ನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.  ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ತಲೆಗೆ ಬಲವಾದ ಆಯುಧದಿಂದ ಹೊಡೆದು ನಂತರ ಕುತ್ತಿಗೆಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಮಗುವಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ನಡುವೆ ದಾದಿಯರು ಮಗುವಿಗೆ ಏನಾಯಿತು ಎಂದು ಕೇಳಿದಾಗ ಅಪ್ಪ ಅಮ್ಮನನ್ನು ಹೊಡೆದರು ಎಂದು ತೊದಲು ಭಾಷೆಯಲ್ಲಿ ಹೇಳುತ್ತಿದೆ.ಈ ಘಟನೆಯಿಂದಾಗಿ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ನಗರಕ್ಕೆ ಬಂದಿದ್ದ ದಂಪತಿಯನ್ನು ಯಾರೋ ಅಪರಿಚಿತರು ದರೋಡೆಗೆ ಯತ್ನಿಸಿ ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ.  ಕೊಲೆಯಾದ ಮಹಿಳೆಯ ಬಟ್ಟೆಗಳನ್ನು ಕೂಡ ಹರಿಯಲಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಆದರೆ, ಈಕೆ ಜತೆಗಿದ್ದ ವ್ಯಕ್ತಿ ಯಾರು, ಆತ ಏನಾದ ಎಂಬುದರ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಡಿವೈಎಸ್‍ಪಿ ಮಂಜುನಾಥಶೆಟ್ಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin