3 ದಿನಗಳ ಪ್ರವಾಸಕ್ಕಾಗಿ ದುಬೈಗೆ ಹಾರಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಈ ಸುದ್ದಿಯನ್ನು ಶೇರ್ ಮಾಡಿ

Siddaramaiah---01

ಬೆಂಗಳೂರು, ಏ.27- ಮೂರು ದಿನಗಳ ಪ್ರವಾಸಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದುಬೈಗೆ ಪ್ರಯಾಣ ಬೆಳೆಸಿದರು. ಪ್ರಧಾನ ಕಾರ್ಯದರ್ಶಿ ಅತಿಕ್, ವಿಶೇಷ ಕರ್ತವ್ಯ ಅಧಿಕಾರಿ ನಿರ್‍ಜಾ ಮೆಹದಿ, ಪುತ್ರ ಡಾ.ಯತೀಂದ್ರ ಮುಂತಾದವರೊಂದಿಗೆ ಇಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಶೇಷ ಸೂಟುಬೂಟಿನೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿದೇಶಕ್ಕೆ ತೆರಳಿದರು. ಇದಕ್ಕೂ ಮುನ್ನ ಸಚಿವರು, ಶಾಸಕರು, ಕಾಂಗ್ರೆಸ್ ಮುಖಂಡರು ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ವಿದೇಶ ಪ್ರವಾಸಕ್ಕೆ ಶುಭಕೋರಿದರು.



ಕರ್ನಾಟಕ ಅನಿವಾಸಿ ಭಾರತೀಯರ ವೇದಿಕೆ ಉದ್ಘಾಟನೆ, ಕೈಗಾರಿಕೋದ್ಯಮಿಗಳ ಜತೆ ಮಾತುಕತೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಿಎಂ ಭಾನುವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Siddaramaiah--01

Facebook Comments

Sri Raghav

Admin