ಪ್ರೀತಿ ನಿರಾಕರಿಸಿದ ಯುವತಿಯನ್ನು ಬೆಂಕಿ ಹಚ್ಚಿ ಕೊಲ್ಲಲೆತ್ನಿಸಿದ ಪಾಗಲ್ ಪ್ರೇಮಿ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

love01

ಬೆಂಗಳೂರು, ಏ.28-ಪ್ರೀತಿ ನಿರಾಕರಿಸಿದ ಯುವತಿಯ ಕೊಲೆಗೆ ಯತ್ನಿಸಿದ್ದ ಪಾಗಲ್ ಪ್ರೇಮಿಯೊಬ್ಬನನ್ನು ಬ್ಯಾಟರಾಯನಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಾಯಂಡಹಳ್ಳಿಯ ಜಮಾದ್ ಪಾಷ (22) ಬಂಧಿತ ಪಾಗಲ್ ಪ್ರೇಮಿ. ಈತ ತನ್ನನ್ನು ಪ್ರೀತಿಸುವಂತೆ ಯುವತಿಯೊಬ್ಬಳ ಬೆನ್ನು ಹತ್ತಿದ್ದು, ಆಕೆ ಪ್ರೀತಿ ನಿರಾಕರಿಸಿದ್ದಾಳೆ ಎನ್ನಲಾಗಿದೆ. ಇದರಿಂದ ಕುಪಿತಗೊಂಡು ಬೆಂಕಿ ಹಚ್ಚಿ ಆಕೆಯನ್ನು ಕೊಲ್ಲಲು ಯತ್ನಿಸಿದ್ದ ಎಂದು ತಿಳಿದುಬಂದಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಬ್ಯಾಟರಾಯನಪುರ ಠಾಣೆ ಪೊಲೀಸರು ತನಿಖೆ ಕೈಗೊಂಡು ಪಾಗಲ್ ಪ್ರೇಮಿಯನ್ನು ಬಂಧಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin