ಅಡಕಮಾರನಹಳ್ಳಿ ಬಳಿ ನಡುರಸ್ತೆಯಲ್ಲೇ ಹೊತ್ತಿ ಉರಿದ ಸ್ಕಾರ್ಪಿಯೊ ಕಾರ್

ಈ ಸುದ್ದಿಯನ್ನು ಶೇರ್ ಮಾಡಿ

Scorpio

ಬೆಂಗಳೂರು. ಎ.29 : ಅಡಕಮಾರನಹಳ್ಳಿ ಬಳಿ ಚಲಿಸುತ್ತಿದ್ದ ಸ್ಕಾರ್ಪಿಯೊ ಕಾರೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದಿದೆ. ಇಂದು ಸಂಜೆ ನೆಲಮಂಗಲ ಕಡೆಯಿಂದ ಬೆಂಗಳೂರಿಗೆ ಬರುತ್ತಿದ್ದ ಈ ಕಾರು ಇದ್ದಕ್ಕಿದಂತೆ ಬೆಂಕಿಹೊತ್ತಿ ಸುಟ್ಟು ಭಸ್ಮವಾಗಿದೆ. ಘಟನೆಯಲ್ಲಿ ಯಾರಿಗೂ ಯಾವುದೇ ತೊಂದರೆಯಾಗಿಲ್ಲ ಎಂದು ತಿಳಿದುಬಂದಿದೆ.  ಕಾರಿಗೆ ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲವಾದರೂ ಶಾರ್ಟ್ ಸರ್ಕೂಟ್ ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಘಟನೆ ತಿಳಿಯುತ್ತಿದ್ದಂತೆ ಮಾದನಾಯಕನ ಹಳ್ಳಿ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು. ಈ ಕುರಿತಂತೆ ಇನ್ನಷ್ಟೇ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin