ರಾಷ್ಟ್ರೀಯ ಪಕ್ಷ ಹೇಗಿರಬೇಕೆಂಬುದು ಬಿಜೆಪಿಗೆ ತಿಳಿದಿರಬೇಕು : ಜಾರ್ಜ್

ಈ ಸುದ್ದಿಯನ್ನು ಶೇರ್ ಮಾಡಿ

KJJ

ಬೆಂಗಳೂರು, ಏ.29- ರಾಷ್ಟ್ರೀಯ ಪಕ್ಷವಾದ ಬಿಜೆಪಿ ಹೇಗಿರಬೇಕು ಎಂಬುದು ನಾಯಕರಿಗೆ ತಿಳಿದಿರಬೇಕು ಎಂದು ಬಿಜೆಪಿ ಆಂತರಿಕ ಕಿತ್ತಾಟದ ಬಗ್ಗೆ ಸಚಿವ ಕೆ.ಜೆ.ಜಾರ್ಜ್ ಪರೋಕ್ಷವಾಗಿ ಟೀಕಿಸಿದ್ದಾರೆ. ನಗರದ ಬಸವೇಶ್ವರ ವೃತ್ತದಲ್ಲಿ ಬಸವೇಶ್ವರ ಜಯಂತಿ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಬಸವೇಶ್ವರರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಬೇರೆ ಪಕ್ಷಗಳ ಕಿತ್ತಾಟದ ಬಗ್ಗೆ ಪ್ರತಿಕ್ರಿಯೆ ನೀಡಲು ಇಷ್ಟವಿಲ್ಲ. ಆದರೆ ರಾಷ್ಟ್ರೀಯ ಪಕ್ಷಗಳು ಹೇಗಿರಬೇಕು ಎಂಬುದು ಆ ನಾಯಕರಿಗೆ ತಿಳಿದಿರಬೇಕು ಎಂದರು.ಬಹಿರಂಗವಾಗಿ ಕಚ್ಚಾಡುತ್ತಿರುವುದು ಸರಿಯಲ್ಲ. ಆಂತರಿಕ ಕಲಹಗಳನ್ನು ಈ ರೀತಿ ಜಗಜ್ಜಾಹೀರು ಮಾಡಿಕೊಂಡಿರುವುದು ಸೂಕ್ತವಲ್ಲ ಎಂದು ಹೇಳಿದರು.
ಬಸವಣ್ಣನವರ ತತ್ವಗಳು ಸಾರ್ವಕಾಲಿಕ ಹಾಗೂ ನಿರಂತರವಾಗಿ ಚಾಲ್ತಿಯಲ್ಲಿರುವಂತಹ ತತ್ವಗಳಾಗಿವೆ. ಅವರ ವಚನದಲ್ಲಿನ ತತ್ವಾದರ್ಶಗಳನ್ನು ನಾವೆಲ್ಲರೂ ಪಾಲಿಸಬೇಕು. ಸಮಾಜಕ್ಕೆ ಉತ್ತಮ ವಿಚಾರಗಳನ್ನು ನೀಡಿದ ಬಸವಣ್ಣನವರನ್ನು ಗೌರವಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ , ಈಶ್ವರ ಖಂಡ್ರೆ ಮತ್ತಿತರರು ಭಾಗವಹಿಸಿದ್ದರು. ಇದೇ ವೇಳೆ ಶರಣರಿಂದ ಬಸವೇಶ್ವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಲಾಯಿತು. ಕನ್ನಡ ಮತ್ತು ಸಂಸ್ಕೃತಿ  ಇಲಾಖೆಯಿಂದ ಬಸವ ವಚನ ವಾಹಿನಿ ಹೆಸರಿನ ಸ್ತಬ್ಧ ಚಿತ್ರಗಳ ಮೆರವಣಿಗೆ ನಡೆಸಲಾಯಿತು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin