ನನ್ನ ಯಾರೂ ಏನೂ ಮಾಡಲೂ ಸಾಧ್ಯವಿಲ್ಲ : ಗುಡುಗಿದ ಈಶ್ವರಪ್ಪ

ಈ ಸುದ್ದಿಯನ್ನು ಶೇರ್ ಮಾಡಿ

Eshwarapa-01

ತುಮಕೂರು, ಏ.30-ನಾನು ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ. ನನ್ನ ಯಾರೂ ಏನೂ ಮಾಡಲೂ ಸಾಧ್ಯವಿಲ್ಲ ಎಂದು ವಿಧಾನಪರಿಷತ್ ವಿರೋಧಿ ಪಕ್ಷದ ನಾಯಕ ಈಶ್ವರಪ್ಪ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ವಿರುದ್ದ ಸಿಡಿದೆದ್ದಿರುವ ಗುಡುಗಿದ್ದಾರೆ.   ಇತ್ತ ಬಿಜೆಪಿ ಹೈಕಮಾಂಡ್ ಮುಖಂಡರು ಬೆಂಗಳೂರಿನಲ್ಲಿ ಬಿಕ್ಕಟ್ಟು ಪರಿಹರಿಸಲು ಸಭೆಗಳ ಮೇಲೆ ಸಭೆ ನಡೆಸಿ ಪ್ರತ್ಯೇಕ ಮಾತುಕತೆ, ಅಭಿಪ್ರಾಯ ಸಂಗ್ರಹ ಮಾಡಿ ಮಾಧ್ಯಮಗಳ ಮುಂದೆ ಬಹಿರಂಗ ಹೇಳಿಕೆಗಳನ್ನು ನೀಡದಂತೆ ಕಟ್ಟಪ್ಪಣೆ ಮಾಡಿದ್ದ ಬೆನ್ನಲ್ಲೇ ಅತ್ತ ಬಿಎಸ್‍ವೈ ವಿರುದ್ಧ ಸಿಡಿದೆದ್ದಿರುವ ಈಶ್ವರಪ್ಪ ನನ್ನ ವಿರುದ್ಧ ಯಾರೂ ಕ್ರಮ ಕೈಗೊಳ್ಳಲು ಸಾಧ್ಯವೇ ಇಲ್ಲ ಎಂದು ತಿರುಗೇಟು ನೀಡಿದ್ದಾರೆ.



ಬಿಜೆಪಿಗೂ ರಾಯಣ್ಣ ಬ್ರಿಗೇಡ್‍ಗೂ ಯಾವುದೇ ಸಂಬಂಧವಿಲ್ಲ. ಪಕ್ಷದವರು ಬ್ರಿಗೇಡ್ ಮತ್ತು ಬ್ರಿಗೇಡ್‍ಯೇತರ ಸಂಘಟನೆ ಮಾಡುವಂತಿಲ್ಲ. ಬಿಜೆಪಿ ನಾಯಕರು, ಪದಾಧಿಕಾರಿಗಳು, ಕಾರ್ಯಕರ್ತರು ರಾಯಣ್ಣ ಬ್ರಿಗೇಡ್ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತಿಲ್ಲ. ಪಕ್ಷದ ಆಂತರಿಕ ವಿದ್ಯಮಾನಗಳು ಬಹಿರಂಗವಾಗಿ ಮತ್ತು ಮಾಧ್ಯಮಗಳ ಮುಂದೆ ವ್ಯಕ್ತಪಡಿಸುವ ಹಾಗಿಲ್ಲ.
ಈ ಎಲ್ಲ ಅಂಶಗಳನ್ನು ಉಲ್ಲಂಘಿಸಿದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂಬ ಎಚ್ಚರಿಕೆಯ ನಡುವೆಯೂ ಈಶ್ವರಪ್ಪ , ತುಮಕೂರಿನ ಬಿಜೆಪಿ ಮುಖಂಡ ನಂದೀಶ್ ಅವರ ಗೃಹ ಪ್ರವೇಶದಲ್ಲಿ ಪಾಲ್ಗೊಂಡು ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ನನ್ನ ವಿರುದ್ಧ ಮುರುಳೀಧರ್ ರಾವ್ ಕ್ರಮ ಕೈಗೊಳ್ಳುತ್ತಾರೆ ಎಂದು ಯಾರೋ ಹುಟ್ಟುಹಾಕಿದ್ದಾರೆ. ಮೂರು ಬಾರಿ ರಾಜ್ಯಾಧ್ಯಕ್ಷನಾಗಿ ಪಕ್ಷಕ್ಕೆ ದುಡಿದಿದ್ದೇನೆ. ನನ್ನ ವಿರುದ್ದ ಕ್ರಮ ಕೈಗೊಳ್ಳಲು ಸಾಧ್ಯವೇ ಇಲ್ಲ .ಸಂಘಟನೆ ಕಟ್ಟುವಲ್ಲಿ ಈಶ್ವರಪ್ಪ ಏನೆಂದು ಎಲ್ಲರಿಗೂ ಗೊತ್ತಿದೆ ಎಂದರು.

ಭಾನುಪ್ರಕಾಶ್ ವಿರುದ್ಧ ಕ್ರಮ ಕೈಗೊಂಡಿರುವುದು ನನ್ನ ಮನಸಿಗೆ ಅತ್ಯಂತ ನೋವು ಉಂಟು ಮಾಡಿದೆ ಎಂದು ಈಶ್ವರಪ್ಪ ಹೇಳಿದರು.   ಯಡಿಯೂರಪ್ಪ ನನ್ನ ವಿರುದ್ದ ಕ್ರಮ ಕೈಗೊಳ್ಳುತ್ತೇನೆ ಎಂದು ತುಂಬ ವರ್ಷಗಳಿಂದ ಹೇಳುತ್ತಲೇ ಇದ್ದರೆ. ಪಕ್ಷ ಸಂಘಟನೆ ವಿಚಾರದಲ್ಲಿ ಈಶ್ವರಪ್ಪನ ಪಾತ್ರ ಏನೆಂದು ಕೇಂದ್ರ ನಾಯಕರಿಗೆ ಗೊತ್ತಿದೆ ಎಂದ ಅವರು, ಯಡಿಯೂರಪ್ಪ ಪಕ್ಷ ತೊರೆಯುವ ಸಂದರ್ಭದಲ್ಲಿ ನಾನು ಸಚಿವ ಸ್ಥಾನ ತ್ಯಜಿಸಿ ಪಕ್ಷದ ರಾಜ್ಯಾಧ್ಯಕ್ಷನಾದೆ. ಅಂತಹ ಸಂದರ್ಭದಲ್ಲಿ ಪಕ್ಷದ ಹೊಣೆ ಹೊತ್ತು ಸಂಘಟನೆ ಮಾಡಿದ್ದೆ. ಹಾಗಾಗಿ ನನ್ನ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವೇ ಇಲ್ಲ ಎಂದು ಹೇಳಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin