ಬಿಜೆಪಿ ಅನಗತ್ಯ ಗೊಂದಲದ ಬಗ್ಗೆ ಜನರಲ್ಲಿ ಕ್ಷಮೆಯಾಚಿಸಿದ ಲಿಂಬಾವಳಿ

ಈ ಸುದ್ದಿಯನ್ನು ಶೇರ್ ಮಾಡಿ

Arvind-Limbavali

ಬೆಂಗಳೂರು, ಏ.30-ಬಿಜೆಪಿ ಆಂತರಿಕ ಗೊಂದಲ ಬಗ್ಗೆ ರಾಜ್ಯದ ಜನರ ಕ್ಷಮೆಯಾಚಿಸುವುದಾಗಿ ಮಾಜಿ ಸಚಿವ ಅರವಿಂದ ಲಿಂಬಾವಳಿ ಇಂದಿಲ್ಲಿ ಹೇಳಿದರು. ಬಿಜೆಪಿ ರಾಜ್ಯ ಉಸ್ತುವಾರಿ ಮುರುಳೀಧರ್ ರಾವ್ ಅವರೊಂದಿಗೆ ಮಾತುಕತೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರಿಷ್ಠರು ರಾಜ್ಯ ನಾಯಕರಿಗೆ ಬಹಿರಂಗ ಹೇಳಿಕೆ ನೀಡದಂತೆ ಸೂಚನೆ ನೀಡಿದ್ದಾರೆ.   ಅದರಂತೆ ಯಾರೇ ಆಗಲಿ ಬಹಿರಂಗ ಹೇಳಿಕೆ ನೀಡಬಾರದು.ಪಕ್ಷದ ವೇದಿಕೆಯಲ್ಲಿ ಕುಳಿತು ಚರ್ಚೆ ನಡೆಸಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದರು. ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಬ್ರಿಗೇಡ್ ಚಟುವಟಿಕೆಗಳಲ್ಲಿ ಭಾಗವಹಿಸಬಾರದು ಎಂದು ಹೈಕಮಾಂಡ್ ಸ್ಪಷ್ಟ ಸೂಚನೆ ನೀಡಿದೆ.  ಸಾಮಾಜಿಕ ರಾಜಕೀಯ ಯಾವುದೇ ಉದ್ದೇಶವಿದ್ದರೂ ಬ್ರಿಗೇಡ್ ಚಟವಟಿಕೆಗಳಲ್ಲಿ ಭಾಗಿಯಾಗಬಾರದು ಎಂದು ಹೇಳಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin